ಸಿಇಒ ಕಾರಿನಲ್ಲಿದ್ದ ವಸ್ತುಗಳನ್ನ ಕದ್ದೊಯ್ದ ದುಷ್ಕರ್ಮಿಗಳು : ಆರೋಪಿಗಳ ಬಂಧನಕ್ಕೆ ಪೊಲೀಸರ ಬಲೆ

ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ ಲ್ಯಾಪ್ ಟಾಪ್, ಪಾಸ್ ಪೋರ್ಟ್ ಗಳನ್ನು ದುಷ್ಕರ್ಮಿಗಳು ಕದ್ದು ಪರಾರೊಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಬಂದಿದ್ದ ಖಾಸಗಿ ಕಂಪನಿಯೊಂದರ ಸಿಇಒ ನವೀನ್ ಝಾ(41), ಬೆಂಗಳೂರಿನ ಗಾಂಧಿ ಬಜಾರ್ ನ ರಾಘವೇಂದ್ರ ಸ್ವಾಮಿ ಮಠದ ಬಳಿ ಕಾರನ್ನು ನಿಲ್ಲಿಸಿ, ಶಾಪಿಂಗ್ ಗೆಂದು ತೆರಳಿದ್ದರು. ರಾತ್ರಿ 9:15ರ ವೇಳೆ ವಾಪಸ್ ಕಾರಿನ ಬಳಿ ಬಂದಾಗ ಕಾರಿನ ಕಿಟಕಿ ಗಾಜುಗಳನ್ನು ಒಡೆದು, ಕಾರಿನಲ್ಲಿಟ್ಟಿದ್ದ ಲ್ಯಾಪ್ ಟಾಪ್, ಪಾಸ್ ಪೋರ್ಟ್ ಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಠಾಣೆಯಿಂದ ಸುಮಾರು 300 ಮೀಟರ್ ದೂರದಲ್ಲಿಯೇ ಕಾರನ್ನು ಪಾರ್ಕ್ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿಯೇ ಕಳ್ಳರು ಈ ದುಷ್ಕೃತ್ಯವೆಸಗಿದ್ದಾರೆ ಎಂದು ನವೀನ್ ತಿಳಿಸಿದ್ದಾರೆ.

ತಕ್ಷಣ ಪೊಲೀಸ್ ಠಾಣೆಗೆ ತೆರಳಿದ ನವೀನ್ ಝಾ, ಘಟನೆ ಕುರಿತು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮಾರವನ್ನು ಪರಿಶೀಲನೆ ನಡೆಸಿರುವ ಪೊಲೀಸರಿಗೆ ನಾಲ್ಕರಿಂದ ಐದು ಜನರ ಯುವಕರ ಗುಂಪೊಂದು ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ.ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಹಿನ್ನಲೆಯಲ್ಲಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com