ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗೆ ಮೀಸಲಾತಿ : ಇದು ಬಿಜೆಪಿಯ ಚುನಾವಣೆ ಗಿಮಿಕ್ – ಸಿದ್ದರಾಮಯ್ಯ ಟೀಕೆ

ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶೇ.10ರಷ್ಟು ಮೀಸಲಾತಿ ನೀಡುತ್ತಿರುವುದು ಸ್ವಾಗತಾರ್ಹ. ಆದರೆ ಇದು  ಬಿಜೆಪಿಯ ಚುನಾವಣೆ ಗಿಮಿಕ್ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ‘ಮೀಸಲಾತಿ ವಿರೋಧಿಸುತ್ತಿದ್ದವರೇ ಬಿಜೆಪಿಯವರು. ಆದರೆ ಈಗ  ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿ  ನೀಡಲು ಬಿಲ್ ಮಂಡನೆ ಮಾಡಲು ಮುಂದಾಗಿದ್ದಾರೆ.  ಲೋಕಸಭೆ ಚುನಾವಣೆ ಹಿನ್ನಲೆ ಈಗ ಬಿಲ್ ಮಂಡನೆಗೆ ಆಸಕ್ತಿ ತೋರುತ್ತಿದ್ದಾರೆ’ ಎಂದು ಹೇಳಿದರು.

ಕಾರ್ಮಿಕರ  ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ. ಮುಷ್ಕರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಹೊರತುಪಡಿಸಿ ಉಳಿದೆಲ್ಲಾ ಕಾರ್ಮಿಕ ಸಂಘಟನೆಗಳು ಭಾಗಿಯಾಗಿವೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

 

Leave a Reply

Your email address will not be published.