ಸಾಮಾನ್ಯ ವರ್ಗದ ಬಡವರಿಗೆ 10% ಮೀಸಲು : ಲೋಕಸಭೆಯಲ್ಲಿ ಮಸೂದೆ ಪಾಸ್

ಸಾಮಾನ್ಯ ವರ್ಗದ ಆರ್ಥಿಕ ದುರ್ಬಲರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಗರಿಷ್ಠ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಸಲುವಾಗಿನ 124ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯು ಮಂಗಳವಾರ ತಡರಾತ್ರಿ ಅಂಗೀಕರಿಸಿದೆ.

ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಒದಗಿಸಲಾಗುತ್ತಿರುವ ಮೀಸಲಾತಿಗಳ ಕೋಟಾ ಪಟ್ಟಿಗೆ ಹೊಸ ಸೇರ್ಪಡೆಯಾಗಲಿದೆ.

ಲೋಕಸಭೆಯಲ್ಲಿ 323 ಸದಸ್ಯರು ಸಾಮಾನ್ಯ ವರ್ಗದ ಬಡವರ ಮೀಸಲಿಗಾಗಿನ ತಿದ್ದುಪಡಿ ಮಸೂದೆ ಪರ ಮತ ಹಾಕಿದರು. ಕೇವಲ 3 ಮಂದಿ ಮಾತ್ರ ವಿರುದ್ಧ ಮತ ಚಲಾಯಿಸಿದರು. ಅಂದರೆ ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಣಯಕ್ಕೆ ಎಲ್ಲಾ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದಂತಾಗಿದೆ.

ಮಸೂದೆ ಅಂಗೀಕಾರಗೊಂಡಿರುವುದನ್ನು ಸ್ವಾಗತಿಸಿರುವ ಪ್ರಧಾನಿ ಮೋದಿ, ಇದು ದೇಶದ ಇತಿಹಾಸದಲ್ಲಿ ಐತಿಹಾಸಿಕ ಕ್ಷಣವಾಗಿದೆ ಎಂದಿದ್ದಾರೆ. 28 ವರ್ಷಗಳ ಹಿಂದೆ ನರಸಿಂಹ ರಾವ್ ಸರ್ಕಾರ ಪ್ರಸ್ತಾಪಿಸಿದ್ದ ಈ ಆರ್ಥಿಕ ದುರ್ಬಲರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾಪ ಇದೀಗ ಜಾರಿಗೆ ಬರುವತ್ತ ಹೆಜ್ಜೆಯಿಡುತ್ತಿದೆ. ಬುಧವಾರ ರಾಜ್ಯಸಭೆಯಲ್ಲಿ ಈ ಮಸೂದೆ ಚರ್ಚೆಗೆ ಬರಲಿದೆ.

Leave a Reply

Your email address will not be published.

Social Media Auto Publish Powered By : XYZScripts.com