ಟಿವಿ ಶೋನಲ್ಲಿ ಮಹಿಳೆಯರ ಬಗ್ಗೆ ಅನುಚಿತ ಕಮೆಂಟ್ – ಹಾರ್ದಿಕ್, ರಾಹುಲ್ ಗೆ ಬಿಸಿಸಿಐ ನೋಟಿಸ್

ಟಿವಿ ಶೋ ಒಂದರಲ್ಲಿ ಮಹಿಳೆಯರ ಬಗ್ಗೆ ಅನುಚಿತವಾದ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ, ಟೀಮ್ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಸ್ಪಷ್ಟನೆ ಕೋರಿ ನೋಟಿಸ್ ಜಾರಿ ಮಾಡಿದೆ.

‘ ಅನುಚಿತ ಕಮೆಂಟ್ ಗಳ ಕುರಿತಾಗಿ ಸ್ಪಷ್ಟನೆ ನೀಡುವಂತೆ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಅವರಿಗೆ ನಾವು ಷೋ ಕಾಸ್ ನೋಟಿಸ್ ಜಾರಿ ಮಾಡಿದ್ದೇವೆ. ಇದಕ್ಕಾಗಿ ಅವರಿಗೆ 24 ಗಂಟೆಗಳ ಸಮಯ ನೀಡಲಾಗಿದೆ ‘ ಎಂದು CoA ಮುಖ್ಯಸ್ಥ ವಿನೋದ್ ರಾಯ್ ತಿಳಿಸಿದ್ದಾರೆ.

ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫೀ ವಿತ್ ಕರನ್’ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್ ರಾಹುಲ್ ಭಾಗವಹಿಸಿದ್ದರು. ಈ ವೇಳೆ ಹಾರ್ದಿಕ್ ಪಾಂಡ್ಯ ಮಹಿಳೆಯರ ಬಗ್ಗೆ ಅನುಚಿತ ಎನಿಸುವಂತಹ ಕೆಲ ಮಾತುಗಳನ್ನಾಡಿದ್ದರು. ಪ್ರೋಗ್ರಾಮ್ ಟಿವಿಯಲ್ಲಿ ಪ್ರಸಾರಗೊಂಡ ನಂತರ ಶೋನಲ್ಲಿ ಹಾರ್ದಿಕ್, ಮಹಿಳೆಯರ ಬಗ್ಗೆ ಆಡಿದ ಮಾತುಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿತ್ತು.

ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾದ ಬಳಿಕ ತಮ್ಮಿಂದ ತಪ್ಪಾಗಿರುವುದನ್ನು ಅರಿತ ಹಾರ್ದಿಕ್ ಪಾಂಡ್ಯ ಟ್ವಿಟರ್ ನಲ್ಲಿ ಕ್ಷಮೆ ಕೇಳಿದ್ದಾರೆ.

Leave a Reply

Your email address will not be published.