Cricket : ಆಸೀ ಆಲ್ರೌಂಡರ್ ಮಿಚೆಲ್ ಮಾರ್ಷ್ ಆಸ್ಪತ್ರೆಗೆ ದಾಖಲು ; ಮೊದಲ ಏಕದಿನಕ್ಕೆ ಅಲಭ್ಯ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ಮೊದಲ ಏಕದಿನ ಪಂದ್ಯ ನಡೆಯಲಿದೆ. ಸರಣಿ ಆರಂಭಕ್ಕೂ ಮುನ್ನ ಆತಿಥೇಯ ಆಸ್ಟ್ರೇಲಿಯಾಕ್ಕೆ ಆಘಾತ ಎದುರಾಗಿದೆ.

ಆಸ್ಟ್ರೇಲಿಯಾ ತಂಡದ ಪ್ರಮುಖ ಆಲ್ರೌಂಡರ್ ಮಿಚೆಲ್ ಮಾರ್ಷ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವ ಮಿಚೆಲ್ ಮಾರ್ಷ್ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದ್ದರಿಂದ ಮೊದಲ ಏಕದಿನ ಪಂದ್ಯಕ್ಕೆ ಮಿಚೆಲ್ ಮಾರ್ಷ್ ಅಲಭ್ಯರಾಗಿದ್ದಾರೆ. ಮಿಚೆಲ್ ಮಾರ್ಷ್ ಬದಲು ಆಷ್ಟನ್ ಅಗರ್ ಅವರನ್ನು ಆಸ್ಟ್ರೇಲಿಯಾ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com