ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಾಣುತ್ತಿಲ್ಲ – ವೈದ್ಯರ ಹೇಳಿಕೆ

ತುಮಕೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಂಡುಬರುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀಗಳನ್ನು ಪ್ರತಿನಿತ್ಯ ಪರೀಕ್ಷೆಗೊಳಪಡಿಸಲಾಗುತ್ತಿದೆ. ರಕ್ತ, ಬಿಪಿ, ಸ್ಕ್ಯಾನ್ನಿಂಗ್, ಎಕ್ಸ-ರೇ ಮಾಡಿಸಲಾಗುತ್ತಿದೆ. ಅದಕ್ಕನುಗುಣವಾಗಿ ಚಿಕಿತ್ಸೆ ಕೂಡ ನೀಡಲಾಗುತ್ತಿದೆ. ಆದರೂ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬರುತ್ತಿಲ್ಲ ಎನ್ನುವುದು ಕೊಂಚ ಆತಂಕಕ್ಕೆ ಗುರಿಮಾಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶ್ರೀಗಳ ದೇಹದಲ್ಲಿ ರಕ್ತ ಕಣಗಳು ಉತ್ಪತ್ತಿಯಾಗುತ್ತಿಲ್ಲ ಹಾಗೂ ಶ್ವಾಸಕೋಶದಲ್ಲಿ ಪದೇ ಪದೇ ನೀರು ತುಂಬಿಕೊಳ್ಳುತ್ತಿದೆ. ಹೀಗಾಗಿ ಉಸಿರಾಟದ ತೊಂದರೆಯಾಗುತ್ತಿದೆ. ಹೀಗಾಗಿ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದಲ್ಲದೇ ಶ್ರೀಗಳಿಗೆ ಅಲ್ಬಮಿನ್ ಪ್ರೋಟೀನ್ ಕೊರತೆ ಇದ್ದು ದಿನದಿಂದ ದಿನಕ್ಕೆ ಆರೋಗ್ಯದಲ್ಲಿ ತುಂಬಾನೇ ವ್ಯತ್ಯಾಸಗಳು ಕಂಡುಬರುತ್ತಿವೆ. ಹೀಗಾಗಿ ಡಾ.ಮಂಜುನಾಥ್ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published.