ನಗರದಲ್ಲಿ ಹೆಚ್ಚಾಗುತ್ತಿರುವ ಬಿಸಿಲು : ಸಂಜೆಯಿಂದ ಬೆಳಿಗ್ಗೆಯವರೆಗೂ ಕೊರೆಯುವ ಚಳಿ

ಬೆಂಗಳೂರಲ್ಲಿ ನಿಧಾನವಾಗಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಸಂಜೆಯಿಂದ ಬೆಳಗ್ಗೆಯವರೆಗೂ ಕೊರೆಯುವ ಚಳಿ ಆವರಿಸುತ್ತಿರುತ್ತದೆ. ಶೀತಮಾರುತ ಬೀಸುವುದು ಕಡಿಮೆಯಾಗಿರುವುದರಿಂದ ಕನಿಷ್ಠ ತಾಪಮಾನ ಶುಕ್ರವಾರ 15.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11,12 ಡಿಗ್ರಿ ಸೆಲ್ಸಿಯಸ್ ಇದ್ದ ಕನಿಷ್ಠ ತಾಪಮಾನ 14.7 ಡಿಗ್ರಿ ತಲುಪಿದೆ. ಇನ್ನು ಎಚ್‌ಎಎಲ್‌ನಲ್ಲಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ಇದೆ.

ಇನ್ನೂ ಐದಾರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.

Social Media Auto Publish Powered By : XYZScripts.com