ಮೆಟ್ರೋ ನೌಕರರ ದಿಢೀರ್ ಪ್ರತಿಭಟನೆ – ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಂದ ಸಂಧಾನ ಯಶಸ್ವಿ

ಮಧ್ಯರಾತ್ರಿ 2 ಗಂಟೆ ಸುಮಾರಿ ನಮ್ಮ ಮೆಟ್ರೋ ನೌಕರರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವೇತನ ಪರಿಷ್ಕರಣೆ ಮತ್ತು ನೌಕರರ ಸಂಘಟನೆಗೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರುವ ಮುನ್ನವೇ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ಸೇಠ್ ನಡೆಸಿದ ಸಂಧಾನ ಯಶಸ್ವಿಯಾಗಿದೆ. ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ ತಡರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಸುಮಾರು 500 ನೌಕರರು ವೇತನ ತಾರತಮ್ಯ ನಿವಾರಿಸಬೇಕು, ಕಾರ್ಮಿಕ ಸಂಘಟನೆಗೆ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಏಕಾಏಕಿ ಪ್ರತಿಭಟನೆ ನಡೆಸಿದರು.
ಇದರಿಂದ ಇಡೀ ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಗೊಂದಲಸ ವಾತಾವರಣ ನಿರ್ಮಾಣವಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೆಟ್ರೋ ರೈಲು ಸಂಚಾರ ಪೂರ್ಣಗೊಳಿಸಿದ್ದರಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಉಂಟಾಗಿಲ್ಲ.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಮೆಟ್ರೋ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಭಾನುವಾರ 1 ಗಂಟೆ ಮುಂಚಿತವಾಗಿ ಮೆಟ್ರೋ ರೈಲು ಸಂಚಾರ ಆರಂಭ ನಾಳೆ ಸಭೆ: ತೀರ್ಮಾನ: ದೇಶದ ಎಲ್ಲಾ ಮೆಟ್ರೋಗಳಲ್ಲಿ ಈಗಾಗಲೇ ಮೂರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಮಾಡಲಾಗಿದೆ. ಆದರೆ ನಮ್ಮ ಮೆಟ್ರೋ ಸಿಬ್ಬಂದಿಗೆ ಇದುವರೆಗೂ ವೇತನ ಪರಿಷ್ಕರಣೆ ಆಗಿಲ್ಲ, ಗುತ್ತಿಗೆ ನೌಕರರಿಗೆ ಬೇಕೆಂದಾಗ ವೇತನ ಪರಿಷ್ಕರಣೆ ಆಗುತ್ತಿದೆ.ಸುಮಾರು 1172 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕಡೆಗಣಿಸಲಾಗಿದೆ. ಈ ಕುರಿತು ಭಾನುವಾರ ನಡೆಯುವ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.

Leave a Reply

Your email address will not be published.

Social Media Auto Publish Powered By : XYZScripts.com