Siddaganga shri : ನಡೆದಾಡುವ ದೇವರ ಪೂರ್ವಾಶ್ರಮ, ಸಿದ್ದಪುರುಷರ ಹೆಜ್ಜೆ ಗುರುತು…

ನಡೆದಾಡುವ ದೇವರು, ಕಾಯಕಯೋಗಿ ಸಿದ್ದಗಂಗಾ ಡಾ. ಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಜನಿಸಿದಾಗಿನಿಂದ 109ನೇ ವರ್ಷದವರೆಗಿನ ಘಟನಾವಳಿಗಳು.

 

1908: ಬೆಂಗಳೂರು ಗ್ರಾಮಾಂತರ ಜಿಲ್ಲೆ ಈಗಿನ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಹೊನ್ನಪ್ಪ , ಗಂಗಮ್ಮ ದಂಪತಿ ಪುತ್ರರತ್ನರಾಗಿ ಜನನ.

1913-27: ವೀರಾಪುರ, ಪಾಲಹಳ್ಳಿಯಲ್ಲಿ ಪ್ರಾಥಮಿಕ, ನಾಗವಲ್ಲಿಯಲ್ಲಿ ಮಾಧ್ಯಮಿಕ, ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಹಾಗೂ ಮೆಟ್ರಿಕ್ಯೂಲೇಷನ್ ತೇರ್ಗಡೆ.

1927-30: ಬೆಂಗಳೂರಿನ ತೋಟದಪ್ಪ ವಿದ್ಯಾರ್ಥಿನಿಲಯದಲ್ಲಿ ಆಶ್ರಯ, ಸೆಂಟ್ರಲ್ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ.

1930: ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಆಯ್ಕೆ.

1941: ಜ.11ರಂದು ಶ್ರೀಉದ್ಧಾನ ಶಿವಯೋಗಿ ಸ್ವಾಮೀಜಿ ಲಿಂಗೈಕ್ಯ, ಮಠಾಧ್ಯಕ್ಷರಾಗಿ ಶಿವಕುಮಾರ ಸ್ವಾಮೀಜಿ ಅಧಿಕಾರ ಸ್ವೀಕಾರ.

1949: ಜೂ.18ರಂದು ಶ್ರೀಸಿದ್ಧಲಿಂಗೇಶ್ವರರ ಸಂಸ್ಕೃತ ಮತ್ತು ವೇದಪಾಠಶಾಲೆ ರಜತೋತ್ಸವ.

 

1950: ಧರ್ಮಸ್ಥಳದ ಶ್ರೀಮಂಜಯ್ಯ ಹೆಗ್ಗಡೆಯವರಿಂದ ಮಹಾ ನಡಾವಳಿ ಉತ್ಸವದಲ್ಲಿ ಗೌರವ ಸ್ವೀಕಾರ.

1956: ಶ್ರೀಕ್ಷೇತ್ರದಲ್ಲಿ ಸಂಸ್ಕೃತ ಕಾಲೇಜು ಕಟ್ಟಡ ನಿರ್ಮಾಣ.

1960: ಶ್ರೀಮಠದಲ್ಲಿ ಸಾರ್ವಜನಿಕ ವಿದ್ಯಾರ್ಥಿನಿಲಯ ನಿರ್ಮಾಣ ಆರಂಭ.

1962: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸ್ಥಾಪನೆ.

1963: ಜಾತ್ರೆಯಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಆರಂಭ ಹಾಗೂ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ.

1965: ನ.6 ಕರ್ನಾಟಕ ವಿವಿಯಿಂದ ಗೌರವ ಡಿ.ಲಿಟ್ ಸ್ವೀಕಾರ.

1970: ಡಿ.27 ಬೆಂಗಳೂರಿನಲ್ಲಿ ನಡೆದ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ.

1972: ಮೇ 26 ಶ್ರೀಮಠದ ಪೀಠಾಧಿಕಾರ ಸ್ವೀಕಾರದ ರಜತ ಮಹೋತ್ಸವ.

ಮೇ.28 ಉಚಿತ ವಿದ್ಯಾರ್ಥಿ ನಿಲಯ ಮತ್ತು ಸಂಸ್ಕೃತ ಕಾಲೇಜಿನ ಸುವರ್ಣ ಮಹೋತ್ಸವ.

1982: ಏ.24 ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಸ್.ಗುಂಡೂರಾವ್ ಅವರಿಂದ ಸುವರ್ಣಮಹೋತ್ಸವ ನೆನಪಿಗಾಗಿ ಗೌರವ ಗ್ರಂಥ `ಸಿದ್ಧಗಂಗಾಶ್ರೀ’ ಬಿಡುಗಡೆ,

ಶ್ರೀಸಿದ್ಧಗಂಗಾ ಮಹಿಳಾ ಕಾಲೇಜು ಸ್ಥಾಪನೆ.

1984: ನೆಲಮಂಗಲದಲ್ಲಿ ಶ್ರೀಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ, ಶ್ರೀಸಿದ್ಧಗಂಗಾ ಫಾರ್ಮಸಿ ಕಾಲೇಜು ಸ್ಥಾಪನೆ

1987: ಏ.20 ಹುಬ್ಬಳ್ಳಿ 3 ಸಾವಿರ ಮಠದ ಜಗದ್ಗುರು ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿ ರಜತ ಮಹೋತ್ಸವದ ಅಧ್ಯಕ್ಷತೆ.

1988: ಮಾ.30 ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ನೇಮಕ.

1992: ಫೆ.16 ಶ್ರೀಗಳ ವಜ್ರ ಮಹೋತ್ಸವ ಸ್ಮಾರಕ ಕಟ್ಟಡಗಳ ಶಿಲಾನ್ಯಾಸ ಅಂದಿನ ಉಪರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮ ಅವರಿಂದ ಸಿದ್ಧಗಂಗಾ ನರ್ಸಿಂಗ್ ಕಾಲೇಜು ಸ್ಥಾಪನೆ.

1995: ಫೆ.2 ಸಿದ್ಧಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆ.

1997: ಮಾ.22 ಶ್ರೀಗಳ ವಜ್ರಮಹೋತ್ಸವ ಬೃಹತ್ ವಿದ್ಯಾರ್ಥಿನಿಲಯ, ಪ್ರಸಾದ ನಿಲಯ ಹಾಗೂ ದಾಸೋಹ ಸಿರಿ ಗ್ರಂಥ ಸಮರ್ಪಣೆ.

2000-05: ಜ.30 ಪ್ರಧಾನಿ ವಾಜಪೇಯಿ ಅವರಿಂದ ಸಂಸ್ಕೃತ ಕಾಲೇಜು, ಅಮೃತ ಮಹೋತ್ಸವ ಉದ್ಘಾಟನೆ. ಅಂಧ ಮಕ್ಕಳಿಗೆ ನೂತನ ಶಾಲಾ ಕಟ್ಟಡ ಹಾಗೂ ವಸತಿ ನಿಲಯ ನಿರ್ಮಾಣ.

2005: ಏ.24 ಶ್ರೀಗಳ 98ನೇ ಜನ್ಮದಿನೋತ್ಸವ ಸಮಾರಂಭ, ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಭಾಗಿ.

ಏ.25 75ನೇ ಪೀಠಾರೋಹಣ(ಅಮೃತ ಮಹೋತ್ಸವ) ಸಮಾರಂಭ ಗೃಹಸಚಿವ ಶಿವರಾಜ್ ಪಾಟೀಲ್, ಸಿಎಂ ಧರಂಸಿಂಗ್ ಭಾಗಿ.

2006:ಏ.7 ಶ್ರೀಗಳ ಗುರುವಂದನಾ ಕಾರ್ಯಕ್ರಮ ರಾಷ್ಟ್ರಪತಿ ಎಪಿಜೆ ಅಬ್ಬುಲ್ ಕಲಾಂ, ರಾಜ್ಯಪಾಲ ಚತುರ್ವೇದಿ, ಸಿಎಂ ಕುಮಾರಸ್ವಾಮಿ, ಡಿಸಿಎಂ ಯಡಿಯೂರಪ್ಪ, ಸುತ್ತೂರು ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧ್ಯಕ್ಷರು ಭಾಗವಹಿಸಿದ್ದರು.

2007: ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ, ಸಿದ್ದಗಂಗಾ ಶ್ರೀಗಳ ಜನ್ಮಶತಮಾನೋತ್ಸವ ಸಮಾರಂಭ

2012: ಗುರುವಂದನಾ ಕಾರ್ಯಕ್ರಮ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿ.

2013: ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ.

2014: ಸಿದ್ದಗಾಂಗಾ ತಾಂತ್ರಿಕ ಮಹಾವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಜಾಗತಿಕ ಸಮಾವೇಶ

2015: ಜುಲೈನಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರದಾನ.

ಸಿದ್ದಪುರುಷರ ಹೆಜ್ಜೆ ಗುರುತು…

??ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ ೧, ೧೯೦೮ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು.

??ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ.

?? ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು.

??ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು.

??ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ.

??ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ ೧೯೨೨ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು ೧೯೨೬ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು.

??೧೯೨೭ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು.

?? ಬೆಂಗಳೂರಿನಲ್ಲಿ ‘ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ’ ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.

??ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು.

??ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

Leave a Reply

Your email address will not be published.