ಕರ್ನಾಟಕ ರತ್ನ, ನಡೆದಾಡುವ ದೇವರು, ತ್ರಿವಿಧ ದಾಸೋಹಿ, ನಡೆದ ಹೆಜ್ಜೆ

ನಡೆದಾಡುವ ದೇವರು, ನಡೆದ ಹೆಜ್ಜೆ
ಜನನ: 1 ಏಪ್ರಿಲ್ 1907
ಜನನ ಸ್ಥಳ: ಮಾಗಡಿ ತಾಲೂಕಿನ ವೀರಾಪುರ
ಗುರು: ಶ್ರೀ ಉದ್ಧಾನ ಸ್ವಾಮೀಜಿಗಳು
ಶಿಷ್ಯರು: ಸಿದ್ದಗಂಗಾ ಶಿಕ್ಷಣ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ದೇಶದ ಅಸಂಖ್ಯಾತ ಭಕ್ತವರ್ಗ
ತತ್ವಜ್ಞ್ಯಾನ: ‘ಕಾಯಕವೇ ಕೈಲಾಸ’
ಪ್ರಶಸ್ತಿಗಳು/ಬಿರುದುಗಳು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ
ನುಡಿ: ಕಾಯಕವೇ ಕೈಲಾಸ
ಕರ್ನಾಟಕ ರತ್ನ ಡಾ ಶ್ರೀ.ಶಿವಕುಮಾರ ಸ್ವಾಮಿಗಳು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು. (1)ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ 3, 1930ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.

ಕರ್ನಾಟಕ ರತ್ನ ಡಾ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. 12 ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ಜನನ ಮತ್ತು ಬಾಲ್ಯ
ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನಪ್ಪ ಮತ್ತು ತಾಯಿ ಗಂಗಮ್ಮ ನವರಿಗೆ ಎಪ್ರಿಲ್ 1, 1904 ರಲ್ಲಿ ಶಿವಣ್ಣನವರಾಗಿ ಜನಿಸಿ, 1913 ರಲ್ಲಿ ಪ್ರಾಥಮಿಕ ಮತ್ತು 1921 ರಲ್ಲಿ ಮಾಧ್ಯಮಿಕ ವಿದ್ಯಾಭ್ಯಾಸವನ್ನು ನಾಗವಲ್ಲಿಯಲ್ಲಿ ಮುಗಿಸಿ 1922 ರಲ್ಲಿ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926 ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927 ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು.

ಶ್ರೀಗಳ ದಿನಚರಿ
ಪ್ರತಿ ದಿನವೂ ಶ್ರೀಗಳು ಬೆಳಗಿನ ನಾಲ್ಕು ಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಾರೆ. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಡ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಾರೆ. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ದಾಲ್, ‘ಸಿಹಿ’ ಹಾಗೂ ‘ಖಾರ ಚಟ್ನಿ’ ಸೇವನೆ. ಎರಡು ಪೀಸ್ ಸೇಬು. ಇದರ ಬಳಿಕ, ‘ಬೇವಿನ-ಚಕ್ಕೆ ಕಷಾಯ’ ಸೇವನೆಯಾಗುತ್ತದೆ.

ಭಕ್ತರ ಭೇಟಿ
ಮಠದ ಪ್ರಸಾದ ನಿಲಯದ ನಿಲಯದ ಮುಂಭಾಗದ ಮಂಚದ ಮೇಲೆ ಆಸೀನರಾಗುತ್ತಾರೆ. ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತದೆ. ಇದರ ಬಳಿಕ ಶ್ರೀಗಳು,ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಾರೆ. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದ ಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಾರೆ. ಸಂಜೆ 4 ಗಂಟೆಯ ನಂತರ ಪುನಃ ಭಕ್ತಗಣದ ಭೇಟಿ. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ. ದಾಸೋಹದ ಮಾಹಿತಿ, ಸುಮಾರು ರಾತ್ರಿ 9 ಗಂಟೆಯವರೆವಿಗೂ ನಡೆಯುತ್ತದೆ.

ಶ್ರೀಗಳ ದಿನಚರಿ ಮುಗಿಯುವುದು ರಾತ್ರಿ 11 ಗಂಟೆಗೆ
ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ. ಸ್ನಾನ, ಪೂಜೆ, ಮತ್ತು, ಪ್ರಸಾದ. ಒಂದು ಚಪಾತಿ ಇಲ್ಲವೇ ಒಂದು ದೋಸೆ. ಅದರ ಜೊತೆಗೆ ಚಟ್ಣಿ ಅಥವಾ ಪಲ್ಯ. ಇದಿಲ್ಲದೇ ಹೋದರೆ, ಉಪ್ಪಿಟ್ಟು, ನಂತರ ಹಣ್ಣಿನ ಸೇವನೆ. ಹತ್ತು ಗಂಟೆಗೆ ಸ್ವಾಮಿಗಳು, ಸಭಾಂಗಣದಲ್ಲಿ ಹಾಜರಾಗುತ್ತಾರೆ. ‘ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ’ ದ ಒಂದು ದೃಷ್ಯವನ್ನು ನೋಡಿದ ಬಳಿಕ ಅಂದಿನ ದಿನದ ಕಾಯಕಕ್ಕೆ ವಿರಾಮ.

ಪ್ರಾರ್ಥನೆ
ಮಕ್ಕಳ ಸಾಮೂಹಿಕ ಪ್ರಾರ್ಥನೆಯಲ್ಲಿ ಅವರು ಪಾಲ್ಹೊಳ್ಳುತ್ತಾರೆ. ಪ್ರಾರ್ಥನೆಯ ನಂತರ, ಕಚೇರಿಗೆ ಧಾವಿಸಿ ಅಲ್ಲಿ, ಪತ್ರಿಕೆಗಳ ವಾಚನವಾಗುತ್ತದೆ. ಅಲ್ಲಿಗೆ ಬಂದ ಭಕ್ತರಿಗೆ, ದರ್ಶನಾರ್ಥಿಗಳಿಗೆ ದರ್ಶನ ನೀಡುತ್ತಾರೆ. ಮಳೆ-ಬೆಳೆ, ಕುಶಲೋಪರಿ ವಿಚಾರ, ಗಣ್ಯರ ಭೇಟಿ, ಮಠದ ಆಡಳಿತ ಕಡತಗಳ ಪರಿಶೀಲನೆ,ಪತ್ರವ್ಯವಹಾರ.

ಶ್ರೀಗಳ ವಿಶ್ರಾಂತಿಯ ಸಮಯ
ರಾತ್ರಿ ಹತ್ತೂವರೆಗೆ ಸ್ವಾಮೀಜಿಯ ಮಲಗುವ ವೇಳೆ. ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದಾರೆ. ಇದು ಕನಿಷ್ಟ ಅರ್ಧತಾಸಾದರೂ ನಡೆಯುತ್ತದೆ. ಹನ್ನೊಂದು ಗಂಟೆಗೆ ಮಲಗುತ್ತಾರೆ. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತ್ತದೆ. ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಾರೆ. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಾರೆ. ದೂರದ ಊರುಗಳಿಗೂ ಓಡಾಡುತ್ತಾರೆ. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಾರೆ. ಬಾಕೀ ಸಂದರ್ಭದಲ್ಲಿ ಏನನ್ನೂ ಸೇವಿಸುವುದಿಲ್ಲ. ಕಳೆದ 8 ದಶಕಗಳ ಜೀವನ ಇದೇ ರೀತಿ ಸಾಗಿದೆ.

ಪ್ರಶಸ್ತಿಗಳು ಮತ್ತು ಸನ್ಮಾನಗಳು
ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಪೂಜ್ಯ ಸ್ವಾಮೀಜಿಯವರ 100ನೇ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.
2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com