Ranji Trophy : ಕ್ವಾರ್ಟರ್ ಫೈನಲ್ ಹಣಾಹಣಿ – ಚಿನ್ನಸ್ವಾಮಿಯಲ್ಲಿ ಕರ್ನಾಟಕ, ಸೌರಾಷ್ಟ್ರ ಫೈಟ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರದಿಂದ ಕರ್ನಾಟಕ ಹಾಗೂ ಸೌರಾಷ್ಟ್ರ ತಂಡಗಳ ನಡುವೆ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ. ಉಭಯ ತಂಡಗಳು ಸೆಮಿಫೈನಲ್ ಸ್ಥಾನಕ್ಕಾಗಿ ಸೆಣಸಾಟ ನಡೆಸಲಿವೆ.

ಪ್ರಸಕ್ತ ಸಾಲಿನ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ರಣಜಿ ತಂಡ, ಸೆಮಿಫೈನಲ್ಸ್ ಗೆ ಅರ್ಹತೆ ಪಡೆದುಕೊಂಡಿದ್ದು, ಸೌರಾಷ್ಟ್ರ ವಿರುದ್ಧ ಕಾದಾಟ ನಡೆಸಲಿದೆ.

ಜನವರಿ 24 ರಿಂದ 28ರ ವರೆಗೆ ರಣಜಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯ, ನಗರದ ಎಂ. ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿದೆ. ಈ ಪಂದ್ಯ ವೀಕ್ಷಿಸಲು ಅಭಿಮಾನಿಗಳಿಗೆ ಉಚಿತ ಪ್ರವೇಶ ಇರುವುದಾಗಿ ಕೆಎಸ್ ಸಿಎ ವಕ್ತಾರ ವಿನಯ್ ಮೃತ್ಯುಂಜಯ್ ಯುಎನ್ಐ ಕನ್ನಡ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಗೆಲುವು ಸಾಧಿಸಿ, ನಾಲ್ಕರ ಘಟಕ್ಕೆ ಅರ್ಹತೆ ಪಡೆದುಕೊಂಡಿದೆ. ಸೌರಾಷ್ಟ್ರ, ಉತ್ತರ ಪ್ರದೇಶ ತಂಡವನ್ನು ಸೋಲಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com