ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ

ಆದಾಯ ತೆರಿಗೆ ಪಾವತಿದಾರರಿಗೆ ಬಹುಮುಖ್ಯ ಮಾಹಿತಿ. ಇನ್ಮುಂದೆ ಪಾನ್ ಕಾರ್ಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
ದೆಹಲಿ ಹೈಕೋರ್ಟ್ ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ಆದೇಶ ನೀಡಿತ್ತು ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಐಟಿ ರಿಟರ್ನ್ಸ್ ಪಾವತಿ ಮಾಡಲು 2018-19 ಸಾಲಿಗೆ ಆಧಾರ್ ಕಡ್ಡಾಯ ಮಾಡಿ ಆದೇಶ ನೀಡಿದೆ.
ಈಗಾಗಲೇ ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ ಮಾಡಲಾಗಿದ್ದು, ಸದ್ಯ ಎಲ್ಲ ಆದಾಯ ತೆರಿಗೆ ಪಾವತಿ ಮಾಡುವವರು ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

Leave a Reply

Your email address will not be published.