ರಾಮಜನ್ಮಭೂಮಿ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ 5300 ಕೋಟಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಮ ಜನ್ಮಭೂಮಿ ಅಯೋಧ್ಯೆಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರ ಚಾಲನೆ ನೀಡಲು ಸಜ್ಜಾಗಿದೆ.

ಕೇಂದ್ರ ಸರ್ಕಾರ 5300 ಕೋಟಿ ವೆಚ್ಚದಲ್ಲಿ 6 ಹೆದ್ದಾರಿಗಳ ನಿರ್ಮಾಣ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶೀಘ್ರವೇ ಚಾಲನೆ ನೀಡಲಿದೆ. ಧಾರ್ಮಿಕವಾಗಿ ಮಹತ್ವ ಪಡೆದಿರುವ ಇಲ್ಲಿನ 84 ಕೋಸಿ ಪರಿಕ್ರಮ ಮಾರ್ಗ ಹಾಗೂ ರಾಮ ವನ ಗಮನ ಮಾರ್ಗವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಎಲ್ಲಾ ಮಹತ್ವದ ಯೋಜನೆಗಳಿಗೆ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ನಿತಿನ್ ಗಡ್ಕರಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ.

2015ಕ್ಕೂ ಮುನ್ನವೇ ಈ ಮಹತ್ವದ ಯೋಜನೆಗಳ ರೂಪು ರೇಷೆಯನ್ನು ತಯಾರಿ ಮಾಡಿದ್ದು, ಆದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಭಾರೀ ಯೋಜನೆಗಳಿಗೆ ಚಾಲನೆ ನೀಡುತ್ತಿದೆ.

Leave a Reply

Your email address will not be published.