ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಪ್ರದರ್ಶನ : ಜೇಸನ್ ಹೋಲ್ಡರ್ ಜೀವಮಾನ ಶ್ರೇಷ್ಠ ಸಾಧನೆ

ಪ್ರವಾಸಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಶ್ರೇಯಾಂಕದಲ್ಲಿ ಏರಿಕೆ ಆಗಿದ್ದು, ಜೀವಮಾನ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಆಂಟಿಗುವಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಪಡೆದು ಬೀಗಿದ ಜೇಸನ್ ಹೋಲ್ಡರ್, ಐಸಿಸಿ ಬೌಲರ್ ಗಳ ಪಟ್ಟಿಯಲ್ಲಿ ಆರನೇ ಸ್ಥಾನ ಪಡೆದು ಬೀಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ವಿಂಡೀಸ್ ಭರ್ಜರಿ ಪ್ರದರ್ಶನ ನೀಡಿ 10 ವಿಕೆಟ್ ಗೆಲುವು ದಾಖಲಿಸಿತ್ತು. ಅಲ್ಲದೆ ಮೂರು ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಹೋಲ್ಡರ್ 778 ಅಂಕಗಳನ್ನು ಕಲೆ ಹಾಕಿದ್ದಾರೆ. ಕರ್ಟ್ನಿ ವಾಲ್ಷ್ ನಿವೃತ್ತಿಯ ಬಳಿಕ ವಿಂಡೀಸ್ ಬೌಲರ್ ಗಳಿಸಿದ ಗರಿಷ್ಠ ಅಂಕವಾಗಿದೆ.

ಇನ್ನೋರ್ವ ವಿಂಡೀಸ್ ಬೌಲರ್ ಕೆಮಾರ್ ರೋಷ್ ಎರಡನೇ ಟೆಸ್ಟ್ ನ ಎರಡೂ ಇನ್ನಿಂಗ್ಸ್ ಗಳಲ್ಲಿ ತಲಾ ನಾಲ್ಕು ವಿಕೆಟ್ ಕಬಳಿಸಿದ್ದು, ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಸದ್ಯ ಕೆಮಾರ್ 12ನೇ ಸ್ಥಾನದಲ್ಲಿದ್ದಾರೆ.

ಉಳಿದಂತೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಎರಡನೇ ಸ್ಥಾನ ಹಾಗೂ ಮಿಚೆಲ್ ಸ್ಟಾರ್ಕ್ 15ನೇ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿದ ಉಸ್ಮಾನ್ ಖವಾಜ ಅವರು ಬ್ಯಾಟಿಂಗ್ ಶ್ರೇಯಾಂಕದಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಟ್ರಾವಿಸ್ ಹೆಡ್ 20ನೇ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com