ದೋಸ್ತಿ ಬಜೆಟ್ : ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಹಾಲಿನ ಪ್ರೋತ್ಸಾಹಧನ ಹೆಚ್ಚಳ..!

ಸಂಕಷ್ಟದಲ್ಲಿರುವ ರೈತಾಪಿ ವರ್ಗವನ್ನು ಓಲೈಕೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಲಿನ ಪ್ರೋತ್ಸಾಹಧನವನ್ನು 5ರಿಂದ 6 ರೂ.ಗೆ ಹೆಚ್ಚಳ ಮಾಡಿದ್ದಾರೆ.

ಪ್ರತಿ ಲೀಟರ್ ಹಾಲಿಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 1 ರೂ. ಹೆಚ್ಚಳ ಮಾಡಿದ್ದಾರೆ. ಇನ್ನು ಮುಂದೆ ಸರ್ಕಾರದಿಂದ ನೀಡುತ್ತಿರುವ ಪ್ರೋತ್ಸಾಹ ಧನ ಲೀಟರ್‍ಗೆ 6 ರೂ. ಸಿಗಲಿದೆ.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದ 2019-20ನೆ ಸಾಲಿನ ಆಯವ್ಯಯದಲ್ಲಿ ಇದನ್ನು ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿರುವ ಕಾರಣ ನಾಡಿನ ಅನ್ನದಾತ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಗ್ರಾಮೀಣ ಭಾಗದ ರೈತರಿಗೆ ಪ್ರೋತ್ಸಾಹ ಧನವಾಗಿ 1 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದರು.

ಈ ಬಾರಿ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿ ಸಂಘಕ್ಕೆ 2500 ಕೋಟಿ ಅನುದಾನವನ್ನು ಪ್ರಕಟಿಸಿರುವ ಕುಮಾರಸ್ವಾಮಿಯವರು ಅಂಗಡಿವಾಡಿ ಸೇರಿದಂತೆ ಎಲ್ಲಾ ಶಾಲಾ ಮಕ್ಕಳಿಗೂ ಹಾಲು ವಿತರಿಸುವ ಮೂಲಕ ಹಾಲು ಉತ್ಪಾದಕರಿಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com