ಮತದಾರರ ಪರಿಶೀಲನೆ ಮತ್ತು ಮಾಹಿತಿ ಹಕ್ಕು ಕಾರ್ಯಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಚಾಲನೆ

ಕೇಂದ್ರ ಚುನಾವಣಾ ಆಯೋಗ ಮತದಾರರಿಗೆ ನೆರವಾಗುವ ಮತದಾರರ ಪರಿಶೀಲನೆ ಮತ್ತು ಮಾಹಿತಿ ಹಕ್ಕು ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿದೆ.

ಈ ಕಾರ್ಯಕ್ರಮದಡಿ ಮತದಾರರ ಹೆಸರು, ವಿಳಾಸ, ವಿವರಗಳ ಬದಲಾವಣೆ, ತಿದ್ದುಪಡಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಪರ್ಕ ಕೇಂದ್ರ ಸ್ಥಾಪಿಸಲಿದೆ. ಇನ್ನು ಮತದಾರ 1950 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ಮುಂಬರುವ ಚುನಾವಣೆ ದೃಷ್ಟಿಯಿಂದ ಚುನಾವಣಾ ಆಯೋಗ ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ, ಕೇಳುವುದು, ಕಲಿಯುವುದು, ಗ್ರಹಿಸುವದು ಹಾಗೂ ಅಳವಡಿಸಿಕೊಳ್ಳುವ ಉದ್ದೇಶದಿಂದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲರ ಬಳಕೆಗೂ ಸುಲಭವಾಗಿಸುವುದೇ ತಂತ್ರಜ್ಞಾನದ ಬಲ. ಇದನ್ನು ಸಮರ್ಥವಾಗಿ ಅಳವಡಿಸಿಕೊಳ್ಳಬೇಕು ಎಂದು ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಸಲಹೆ ನೀಡಿದ್ದಾರೆ.

Leave a Reply

Your email address will not be published.