ಮತ್ತೆ ಉಗ್ರರ ಅಟ್ಟಹಾಸ : ಶ್ರೀನಗರದಲ್ಲಿ ಗ್ರೆನೇಡ್ ದಾಳಿ : 11 ಮಂದಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 7 ಮಂದಿ ಸೈನಿಕರೂ ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.

ಶ್ರೀನಗರದ ಜನನಿಭಿಡ ಲಾಲ್ ಚೌಕ್‍ನ ಪಲ್ಲಾಡಿಯಂ ಸಿನೆಮಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ಸುಮಾರು 6.45ರ ವೇಳೆಯಲ್ಲಿ ಉಗ್ರರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ.
ಪರಿಣಾಮ ಘಟನೆಯಲ್ಲಿ 7 ಸೈನಿಕರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿ ದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರು ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸಮೀಪದ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com