ಬಿಎಸ್‍ವೈ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ : ನೂರಾರು ಕಾರ್ಯಕರ್ತರ ಬಂಧನ

ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಅಂಬೇಡ್ಕರ್ ಸರ್ಕಲ್‍ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾ ಕಾರರನ್ನು ಪೊಲೀಸರು ತಡೆದಿದ್ದಾರೆ. ಆಗ ನಡುವೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ಉಂಟಾಗಿದೆ. ಈ ವೇಳೆ ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದರು.

ಸರ್ಕಾರ ಬೀಳಿಸಲು ಬಿಎಸ್‍ವೈ ಮಾತನಾಡಿರುವ ಆಡಿಯೋವನ್ನು ಅವರೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಬಿಎಸ್‍ವೈ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಬೇಕು. ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿರುವ ಆರೋಪದ ಮೇಲೆ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಕಡೆಗಣನೆ ಮಾಡಿದ್ದಾರೆ. ದೇಶದ ಪ್ರಧಾನಮಂತ್ರಿ ಚೌಕದಾರ ಅಲ್ಲ, ಚೋರ ಎಂದು ಘೋಷಣೆ ಕೂಗಿದರು.

ಶಾಸಕ ಪ್ರಸಾದ ಅಬ್ಬಯ್ಯ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರುಗಳಾದ ಅನೀಲಕುಮಾರ ಪಾಟೀಲ, ಅಲ್ತಾಪ್ ಹಳ್ಳೂರ, ವಾಯುವ್ಯ ಸಾರಿಗೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ನಾಗರಾಜ ಗೌರಿ, ರಜತ್ ಉಳ್ಳಾಗಡ್ಡಿಮಠ, ಬಂಗಾರೇಶ ಹಿರೇಮಠ, ಗಣೇಶ ಟಗರಗುಂಟಿ, ತಾರಾದೇವಿ ವಾಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

Leave a Reply

Your email address will not be published.