ಅತೃಪ್ತ ಶಾಸಕರನ್ನು ಅನರ್ಹತೆಗೆ ಕೋರಿ ಸಿದ್ಧರಾಮಯ್ಯ ಸ್ಪೀಕರ್‍ಗೆ ದೂರು!

ದೋಸ್ತಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದ ಕಾಂಗ್ರೆಸ್‍ನ ನಾಲ್ವರು ಅತೃಪ್ತ ಶಾಸಕರನ್ನು ಪಕ್ಷದಿಂದ ಅನರ್ಹ ಗೊಳಿಸಬೇಕೆಂದು ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಸಚಿವ ಕೃಷ್ಣ ಭೈರೇಗೌಡ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಜೊತೆಯಲ್ಲಿ ಸ್ಪೀಕರ್ ಅವರನ್ನು ಭೇಟಿ ಮಾಡಿದ ಸಿದ್ಧರಾಮಯ್ಯ ಅವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಈ ಹಿಂದೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೂ ಸಭೆಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಬಿ.ನಾಗೇಂದ್ರ ಮತ್ತು ಮಹೇಶ್ ಕಮಟಳ್ಳಿ ಅವರು ಗೈರಾಗಿದ್ದರು. ಕಾರಣ ಅವರನ್ನು ಅನರ್ಹಗೊಳಿಸಿ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.

ಈ ನಾಲ್ವರು ಶಾಸಕರು ಪಕ್ಷದ ಎಲ್ಲ ಆದೇಶಗಳನ್ನು ಉಲ್ಲಂಘಿಸಿ ದ್ದಾರೆ. ಮತ್ತು ಕಳೆದ ಹಲವಾರು ದಿನಗಳಿಂದ ಈ ಶಾಸಕರು ಪಕ್ಷ ನಾಯಕರ ಸಂಪರ್ಕಕ್ಕೂ ಸಿಗುತ್ತಿಲ್ಲ, ಈ ಎಲ್ಲ ಅಶಿಸ್ತಿನ ವರ್ತನೆಗಳ ಕಾರಣಕ್ಕಾಗಿ ನಾಲ್ವರು ಶಾಸಕರನ್ನು ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com