ಚುನಾವಣಾ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ..!

ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಭಾನುವಾರದಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತಿನ ಕೃಷಿ ಸಚಿವ ಆರ್ ಸಿ ಫಾಲ್ದು ಹಾಗೂ ಸಂಸದರಾದ ಪೂನಮ್ ಮದಂ ಅವರು ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಂದು ಜಾಮ್ ನಗರದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಇದಕ್ಕೂ ಮುನ್ನ ರಿವಾಬಾ ಅವರ ಕೈಗೆ ಕೇಸರಿ ಬಾವುಟ ಸಿಕ್ಕಿದೆ. ರಿವಾಬಾ ಅವರು ಕರ್ಣಿ ಸೇನಾದ ಮಹಿಳಾ ಘಟಕದ ಮುಖ್ಯಸ್ಥೆಯಾಗಿ, ಸಾಕಷ್ಟು ಹೆಸರು ಗಳಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಸೆಲೆಬ್ರಿಟಿಗಳಿಗೆ ಗಾಳ ಹಾಕುತ್ತಿರುವ ಬಿಜೆಪಿ ಈಗಾಗಲೇ ಅನೇಕ ಸಿನಿ ತಾರೆಯರು, ಕ್ರಿಕೆಟರ್, ಮಾಜಿ ಕ್ರಿಕೆಟರ್ ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಕೆಲವರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಳಸಲು ಯೋಜನೆ ಹಾಕಿಕೊಂಡಿದೆ.

ರಿವಾಬಾ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದೇ ಬಿಂಬಿಸಲಾಗುತ್ತಿದೆ. ಪದ್ಮಾವತ್ ಚಿತ್ರ ಬಿಡುಗಡೆಗೆ ವಿರೋಧಿಸಿದ್ದ ಕಾರ್ಣಿ ಸೇನೆ ಸಾಕಷ್ಟು ಸದ್ದು ಮಾಡಿದ್ದು ಸುಳ್ಳಲ್ಲ. ರವೀಂದ್ರ ಜಡೇಜಾ ಹಾಗೂ ರಿವಾಬಾ ಅವರ ಮದುವೆಗೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿತ್ತು. ನಂತರ ಮೋದಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ ಮಾತುಕತೆ ನಡೆಸಿದ್ದರು. ಬಿಜೆಪಿ ಸರ್ಕಾರದ ಯೋಜನೆಗಳ ಪ್ರಚಾರವನ್ನು ದಂಪತಿ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Leave a Reply

Your email address will not be published.

Social Media Auto Publish Powered By : XYZScripts.com