ಭಾರತ ಕ್ರಿಕೆಟ್ ತಂಡ ಆಟವನ್ನು ರಾಜಕೀಯಗೊಳಿಸಿದೆ – ಪಾಕಿಸ್ತಾನದ ವಿದೇಶಾಂಗ ಸಚಿವ

ಶುಕ್ರವಾರದಂದು ರಾಂಚಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಸೇನೆಯ ಕ್ಯಾಪ್ ಧರಿಸಿ ಆಟವಾಡಿದ್ದರು.

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್. ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಟೀಂ ಇಂಡಿಯಾ ಆಟಗಾರರು ಈ ಕ್ಯಾಪ್ ಧರಿಸಿದ್ದರು.

ಇದೀಗ ಪಾಕಿಸ್ತಾನ, ಇದಕ್ಕೆ ಕ್ಯಾತೆ ತೆಗೆದಿದೆಯಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ, ಭಾರತ ತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ವಿಕೃತ ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ, ಭಾರತ ಕ್ರಿಕೆಟ್ ತಂಡ ಆಟವನ್ನು ರಾಜಕೀಯಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಭಾರತದ ಆಟಗಾರರು ಮಿಲಿಟರಿ ಕ್ಯಾಪ್ ಧರಿಸಿ ಕಣಕ್ಕಿಳಿದಿರುವುದು ಐಸಿಸಿ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿರುವ ಖುರೇಶಿ, ಪಾಕಿಸ್ತಾನ ಈ ವಿಷಯವನ್ನು ಪ್ರಸ್ತಾಪಿಸುವ ಮುನ್ನವೇ ಕ್ರಮ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಫೆಬ್ರವರಿ 14 ರಂದು ಪುಲ್ವಾಮದಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ 10 ಕ್ಕೂ ಅಧಿಕ ಮಂದಿ ಸಿ.ಆರ್.ಪಿ.ಎಫ್. ಯೋಧರು ಹುತಾತ್ಮರಾಗಿದ್ದರು. ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಟೀಂ ಇಂಡಿಯಾ ಆಟಗಾರರು ಸೇನಾ ಕ್ಯಾಪ್ ಧರಿಸಿ ಆಟವಾಡಿದ್ದರು. ಅಲ್ಲದೆ ಈ ಪಂದ್ಯದಿಂದ ಬಂದ ಹಣವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲು ನಿರ್ಧರಿಸಿದ್ದರು.

 

 

Leave a Reply

Your email address will not be published.

Social Media Auto Publish Powered By : XYZScripts.com