‘ಬಿಗ್ ಬಾಸ್’ ವಿನ್ನರ್ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ : ಸ್ವೀಪ್ ಚಟುವಟಿಕೆಗೆ ಹಾಸನ ಜಿಲ್ಲಾ ರಾಯಭಾರಿ

ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಮತದಾನ ಜಾಗೃತಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.

ಹಾಸನದಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಲೋಕಸಭೆ ಚುನಾವಣೆ ಸಂಬಂಧ ಸ್ವೀಪ್ ಚಟುವಟಿಕೆಯನ್ನು ಕೈಗೊಳ್ಳಲಾಗಿದೆ. ಸ್ವೀಪ್ ಚಟುವಟಿಕೆಗೆ ಹಾಸನ ಜಿಲ್ಲಾ ರಾಯಭಾರಿಯಾಗಿ ‘ಬಿಗ್ ಬಾಸ್’ ವಿನ್ನರ್  ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಚುನಾವಣಾಧಿಕಾರಿ ಅಕ್ರಂ ಪಾಷ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಡಳಿತದಿಂದ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಆಯೋಜಿಸಲಾಗುವ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com