ಶಿವಣ್ಣನ ಚಿತ್ರಕ್ಕೆ ಸುದೀಪ್ ಸಾಥ್ : ಯಾವ ರೀತಿ ಗೊತ್ತಾ..? ಈ ಸುದ್ದಿ ನೋಡಿ..

ದಿ ವಿಲನ್ ಚಿತ್ರದ ನಂತರ ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಅಷ್ಟಾಗಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇಬ್ಬರು ಬೇರೆ ಬೇರೆ ಚಿತ್ರಗಳಲ್ಲಿ ಬ್ಯುಸಿಯಾದರು. ಇದೀಗ, ತುಂಬಾ ದಿನದ ನಂತರ ಶಿವಣ್ಣನ ಚಿತ್ರಕ್ಕೆ ಸುದೀಪ್ ಸಾಥ್ ನೀಡುತ್ತಿದ್ದಾರೆ.

ಹೌದು, ಶಿವರಾಜ್ ಕುಮಾರ್ ಅಭಿನಯದ ‘ಕವಚ’ ಸಿನಿಮಾದ ಹಾಡೊಂದನ್ನ ಕಿಚ್ಚ ಸುದೀಪ್ ಬಿಡುಗಡೆ ಮಾಡುತ್ತಿದ್ದಾರೆ. ಮಾರ್ಚ್ 15 ರಂದು ಕವಚ ಸಿನಿಮಾದ ‘ರೆಕ್ಕೆಯಾ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಮಾಡಲಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿರುವ ಈ ಹಾಡನ್ನ ಎಸ್ ಪಿ ಬಾಲಸುಬ್ರಮಣ್ಯಂ ಮತ್ತು ಶ್ರೀಯಾ ಜಯದೀಪ್ ಈ ಹಾಡಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಈಗಾಗಲೇ ಕವಚ ಚಿತ್ರದ ಟ್ರೈಲರ್ ಮತ್ತು ಆಡಿಯೋ ಬಿಡುಗಡೆಯಾಗಿದ್ದು ಸ್ಯಾಂಡಲ್ ವುಡ್ ಪ್ರೇಕ್ಷಕರ ಗಮನ ಸೆಳೆದಿದೆ. ಏಪ್ರಿಲ್ 5 ರಂದು ಸಿನಿಮಾ ಚಿತ್ರಮಂದಿರಕ್ಕೆ ಬರ್ತಿದೆ. 2016ರಲ್ಲಿ ತೆರೆಕಂಡಿದ್ದು ಮಲಯಾಳಂನ ‘ಒಪ್ಪಂ’ ಚಿತ್ರದ ರೀಮೇಕ್ ಸಿನಿಮಾ ಇದಾಗಿದ್ದು, ಹಲವು ವರ್ಷದ ನಂತರ ಶಿವಣ್ಣ ರೀಮೇಕ್ ಮಾಡ್ತಿದ್ದಾರೆ. ಜಿವಿಆರ್ ವಾಸು ನಿರ್ದೇಶನದ ಈ ಚಿತ್ರದಲ್ಲಿ ಕೃತಿಕಾ ಜಯಕುಮಾರ್, ಇಶಾ ಕೊಪ್ಪಿಕರ್, ಬೇಬಿ ಮೀನಾಕ್ಷಿ, ವಸಿಷ್ಠ ಸಿಂಹ ನಟಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com