‘ಯಡಿಯೂರಪ್ಪ ಹಾಲಿ ಸಂಸದರಿಗೆ ಟಿಕೆಟ್ ಗ್ಯಾರಂಟಿ ಗೊಂದಲವಿಲ್ಲ’ – ಸಂಸದ ಪ್ರತಾಪ್ ಸಿಂಹ ಟಾಂಗ್

ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರಿಗಿಂತ ದೊಡ್ಡವರು ಯಾರು ಇಲ್ಲ. ಚುನಾವಣೆಗೆ ನಿಲ್ಲಬೇಕೆಂಬ ಆಸೆ ಎಲ್ಲರಿಗೂ ಇರುತ್ತೆ. ಆದರೆ ಯಡಿಯೂರಪ್ಪ ಹಾಲಿ ಸಂಸದರಿಗೆ ಟಿಕೆಟ್ ಗ್ಯಾರಂಟಿ ಎಂದಿರುವಾಗ ಯಾವುದೇ ಗೊಂದಲವಿಲ್ಲ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಲೇವಡಿ ಮಾಡಿ, ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್‍ಗೆ ಗೊಂದಲ ಇದೆ. ಎಂದು ಸೀತಾರಾಮಾ ಕಲ್ಯಾಣ ಚಿತ್ರದ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಜೆಡಿಎಸ್ ಗೆ ಟಾಂಗ್ ನೀಡಿದರು.

ಇನ್ನು ತಮ್ಮ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಇರಬಹುದು. ಆದರೆ ಬಿಜೆಪಿಯಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ. ಬಿಎಸ್ ಯಡಿಯೂರಪ್ಪ ಅವರು ಹಾಲಿ ಸಂಸದರಿಗೆ ಟಿಕೆಟ್ ಗ್ಯಾರಂಟಿ ಎಂದಿರುವಾಗ ಟಿಕೆಟ್ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಚುನಾವಣೆಯಲ್ಲಿ ಗೆದ್ದು ಬರುವುದು ಜನರ ಕೆಲಸ ಮಾಡಲು. ನಾನು ಸಂಸದನಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅವುಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಜಾತಿ ಲೆಕ್ಕಾಚಾರ, ಸಮೀಕರಣಗಳು ಚುನಾವಣೆಗೆ ಮುಖ್ಯವಲ್ಲ ಎಂದರು.

Leave a Reply

Your email address will not be published.