ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ..

ಯಾರ್ರೀ ಪ್ರತಾಪ್ ಸಿಂಹ ? ಮೈಸೂರಿನ ಪ್ರತಾಪ್ ಸಿಂಹ ಏನು ಕೊಡುಗೆ ಕೊಟ್ಟಿದ್ದಾನೆ? ಈ ಹಿಂದೆ ನಾನು, ಮಹದೇವಪ್ಪ ಬೆಂಗಳೂರು – ಮೈಸೂರು ರಸ್ತೆ ಅಭಿವೃದ್ಧಿ ಪಡಿಸುವಾಗ ಅವನು ಎಲ್ಲಿದ್ದ?.ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದು ಎಂದು ಹೇಳಿ ತಿರುಗುತ್ತಿದ್ದಾನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಮಾತ್ರವಲ್ಲ, ಬಿಜೆಪಿ ಯಾವ ಸಂಸದರು ಯಾವ ಕೆಲಸವನ್ನು ಮಾಡಿಲ್ಲ. ಏನು‌ ಮಾಡದೆ ಸುಮ್ಮನೆ‌ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮ ಧೃವನಾರಾಯಣ್ ಜೊತೆಗೆ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿಯವರು ಚರ್ಚೆಗೆ ಬರುತ್ತಾರಾ? ಶೋಭ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಬರುತ್ತಾರಾ? ಎಂದು ಚರ್ಚೆಗೆ ಆಹ್ವಾನಿಸಿದರು.

ದೇಶದ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಎಂದು ರಾಜಕಾರಣ ಬಳಸಿಕೊಂಡಿಲ್ಲ. ಬಿಜೆಪಿಯವರು ಬಡತನ, ನಿರುದ್ಯೋಗ, ರೈತರ ಸಮಸ್ಯೆಯಂತ ವಿಚಾರಗಳ ಮೇಲೆ ಚುನಾವಣೆ ಎದುರಿಸಲ್ಲ. ಅವರು ಏನಿದ್ದರೂ ಭಾವನಾತ್ಮಕ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಈ ಬಾರಿ ಅವರು ಯಾವ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಈ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಜಿಕಲ್ ಸ್ಟ್ರೈಕ್ ನಿಂದ ತಮಗೆ ಲಾಭವಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ. ಆದರೆ ಸರ್ಜಿಕಲ್ ಸ್ಟ್ರೈಕ್ ಮುಂಚೆ ಮೋದಿ ವರ್ಚಸ್ಸು ಬಿದ್ದು ಹೋಗಿತ್ತಾ? ಎಂದು ಸಿದ್ದರಾಮಯ್ಯ ಟೀಕಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com