ಮೈತ್ರಿ ಇಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನ..?

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.

ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಬಿಜೆಪಿ ವಿರುದ್ಧ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿವೆ. ಇದೇ ವೇಳೆ ಬಿ.ಎಸ್.ಪಿ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದೆ.

ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯಸಭೆ ಸದಸ್ಯ ಅಶೋಕ ಸಿದ್ಧಾರ್ಥ ಹೇಳಿದ್ದಾರೆ. ಏಪ್ರಿಲ್ 10 ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಕ್ಷದ ಮುಖ್ಯಸ್ಥರಾದ ಮಾಯಾವತಿ ಭಾಗವಹಿಸಲಿದ್ದಾರೆ. ದೇಶದಲ್ಲಿ 3 ನೇ ಅತಿ ದೊಡ್ಡ ಪಕ್ಷವಾಗಿರುವ ಬಿ.ಎಸ್.ಪಿ.ಗೆ ತನ್ನದೇ ಆದ ವೋಟ್ ಬ್ಯಾಂಕ್ ಇದ್ದು, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಪಕ್ಷದ ಶಾಸಕ ಎನ್. ಮಹೇಶ್, ಶೀಘ್ರದಲ್ಲಿಯೇ ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com