ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ..

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ ಬಿಜೆಪಿಯ ಹಿರಿಯ ನಾಯಕರು ಪಟ್ಟಿಯ್ನು ಬಿಡುಗಡೆ ಮಾಡಲಿದ್ದಾರೆ. ಅಪರಾಹ್ನ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯ ನಂತರ ಪಟ್ಟ ಬಿಡುಗಡೆಯಾಗಲಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಪಕ್ಷಾಧ್ಯಕ್ಷ ಅಮಿತ್ ಶಾ, ಜೊತೆಗೆ ಬಿಜೆಪಿ ಹಿರಿಯ ಮುಖಂಡರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್ ಮುಂತಾದವರು ಭಾಗಿಯಾಗಲಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಇದಕ್ಕೂ ಮುನ್ನ ಮಾರ್ಚ್ 08 ರಂದು ಸಭೆ ಸೇರಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ನಿರ್ಧಾರಕ್ಕೆ ಬಂದಿದ್ದವು. 2014 ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿದ್ದ ನರೇಂದ್ರ ಮೋದಿ 5,81,022 ಮತಗಳನ್ನು ಪಡೆದು ಅಮೋಘ ಗೆಲುವು ಸಾಧಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com