ರಾಹುಲ್ ಸ್ಪರ್ಧೆ ಇಲ್ಲಲ್ಲ, ಅಲ್ಲಿ..! – ಬೆಂ. ಗ್ರಾಮಾಂತರದ ಬಳಿಕ ವಯನಾಡ್ ಸುದ್ದಿ

ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಇದೀಗ ಅವರು ಕೇರಳದ ವಯನಾಡ್‍ನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿ ಬರಲಾರಂಭಿಸಿವೆ.
ಕಾಂಗ್ರೆಸ್ ಪ್ರಾಬಲ್ಯ ಇರುವ ಅಮೇಠಿ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದರೂ, ಅವರು ಅದರ ಜೊತೆಗೆ ಮತ್ತೊಂದು ಕ್ಷೇತ್ರದದಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕರ್ನಾಟಕ, ಕೇರಳ ಅಥವಾ ತಮಿಳುನಾಡಿನ ಯಾವುದಾದರೊಂದು ಲೋಕಸಭೆ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.
ವಿಶೇಷ ಎಂದರೆ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕೋರಿ ಅಲ್ಲಿನ ಕಾಂಗ್ರೆಸ್ ಮುಖಂಡರೇ ರಾಹುಲ್ ಗಾಂಧಿ ಅವರನ್ನು ಕೇಳಿಕೊಂಡಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಚುನಾವಣಾ ಸಮಿತಿಯ ಮುಖ್ಯಸ್ಥ ಮುಲ್ಲಪಲ್ಲಿ ರಾಮಚಂದ್ರನ್ ಅವರಿಂದ ಬಹಿರಂಗಗೊಂಡಿದೆ.
ಆದರೆ ಸದ್ಯ ಈ ಬಗ್ಗೆ ರಾಹುಲ್ ಗಾಂಧಿ ತಮ್ಮ ನಿರ್ಧಾರ ಸ್ಪಷ್ಟಪಡಿಸಿಲ್ಲ. ಇತ್ತೀಚಿನ ಮಾಹಿತಿ ಪ್ರಕಾರ ಈ ಕುರಿತು ರಾಹುಲ್ ಗಾಂಧಿ ಇವತ್ತು(ಮಾ. 24) ತಮ್ಮ ನಿರ್ಧಾರ ಸ್ಪಷ್ಟಪಡಿಸಬಹುದು ಎನ್ನಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com