ಪಾಕ್ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ : 16 ಜನ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನದ ನೈಋತ್ಯ ಭಾಗದಲ್ಲಿರುವ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 16 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ 7.30ಕ್ಕೆ ಹಜಾರಗಂಜಿ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಿ ಈ ಕೃತ್ಯ ನಡೆಸಲಾಗಿದೆ. ಇಲ್ಲಿಯವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿಲ್ಲ.

ಸ್ಫೋಟಕಗಳನ್ನು ಆಲೂಗೆಡ್ಡೆ ಚೀಲದ ಒಳಗಡೆ ಇಡಲಾಗಿತ್ತು. ಈ ಘಟನೆಯಲ್ಲಿ ಓರ್ವ ಸೈನಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹಿಂದೆಯೂ ದಾಳಿ ನಡೆದಿತ್ತು. ಶಿಯಾ ಮುಸ್ಲಿಮರಾದ ಹಜಾರಾ ಪಂಗಡದವರು ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಪಾಕಿಸ್ತಾನ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪ್ರಕಾರ 2012ರ ಜನವರಿಯಿಂದ 2017ರ ಡಿಸೆಂಬರ್ ವರೆಗಿನ ಅವಧಿಯಲ್ಲಿ ಒಟ್ಟು 627 ಮಂದಿ ಹಜಾರಾ ಪಂಗಡದವರು ಮೃತಪಟ್ಟಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com