ಸಾಹಸ ಸಿಂಹ ಅಭಿಮಾನಿಗಳಿಗೆ ಗುಡ್ ನ್ಯೂಸ್ : ವಿಷ್ಣುವರ್ಧನ್ ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ 

ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ವಿವಾದ ಕೊನೆಗೂ ಕೊನೆಗೊಂಡಿದ್ದು, ಅಭಿಮಾನಿಗಳ ಮುಖದಲ್ಲಿ ಸಂತಸ ಮೂಡಿಸಿದೆ. ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಜಿಲ್ಲಾಡಳಿತ ಈಗಾಗಲೇ ಮೈಸೂರು ತಾಲೂಕು ಉದ್ಬೂರು ಸಮೀಪ ವಿಷ್ಣುವರ್ಧನ್ ಸ್ಮಾರಕಕ್ಕೆ ಸ್ಥಳ ನಿಗದಿ ಮಾಡಿತ್ತು. ಜಿಲ್ಲಾಡಳಿತವು ಸ್ಮಾರಕಕ್ಕೆ ನೀಡಿದ್ದ ಭೂಮಿಗೆ ಸಂಬಂಧಪಟ್ಟಂತೆ, ಸ್ಮಾರಕ ನಿರ್ಮಾಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು, ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದು ಮಾಡಿ ವಿಷ್ಣು ಸ್ಮಾರಕಕ್ಕೆ ಸಮ್ಮತಿ ನೀಡಿದೆ.

ರಾಜ್ಯ ಸರ್ಕಾರ ಸ್ಮಾರಕದ ಕೆಲಸವನ್ನು ನಿಧಾನಗತಿಯಲ್ಲಿ ಮುಂದುವರಿಸಿಕೊಂಡು ಬಂದಿತ್ತು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರ ಒತ್ತಾಯಕ್ಕೆ ಮಣಿದು ಸರ್ಕಾರವು, ವಿಷ್ಣು ಸ್ಮಾರಕಕ್ಕೆ ಮೈಸೂರಿನ ಎಚ್‌ಡಿ ಕೋಟೆ ರಸ್ತೆಯಲ್ಲಿರುವ ಹಾಲಾಳುವಿನ ಉದ್ಬೂರು ಕ್ರಾಸ್ ಬಳಿ ಜಮೀನು ನೀಡಿತ್ತು.

2016 ರ ಡಿಸೆಂಬರ್ 6 ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ ಮಾಡುವುದಕ್ಕೆ ಮುಂದಾಗಿದ್ದರು. ಬಳಿಕ ವಿಷ್ಣು ವರ್ಧನ್ ಕುಟುಂಬಸ್ಥರು ಆ ಜಾಗದಲ್ಲಿ ಭೂಮಿಪೂಜೆ ನಡೆಸಿದ್ದರು. ಪೂಜೆ ನಡೆಸಿದ ಬಳಿಕ ಸ್ಥಳಕ್ಕೆ ಸಂಬಂಧಪಟ್ಟಂತೆ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೀಗಾಗಿ, ವಿಷ್ಣುವರ್ಧನ್ ಸ್ಮಾರಕದ ಕೆಲಸ ಅಲ್ಲಿಗೆ ನಿಂತು ಹೋಗಿತ್ತು. ಇದೀಗ, ಹೈ ಕೋರ್ಟ್ ಆದೇಶದಂತೆ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ, ಅಂತಿಮ ವಿಚಾರಣೆ ಮಾತ್ರ ಬಾಕಿ ಇದೆ.

ಹೀಗಾಗಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com