Brothers fight : ಯಾರೇನೇ ಹೇಳಿದ್ರೂ ಕಾಂಗ್ರೆಸ್ ಗಿಲ್ಲ ಬೆಂಬಲ – ರಮೇಶ್ ಜಾರಕಿಹೊಳಿ…

ಇದೇ 23ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುವಂತೆ ಕಾಂಗ್ರೆಸ್‌ನ ಭಿನ್ನ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಯಾರು ಏನೇ ಹೇಳಿದರೂ ಕೇಳಬೇಡಿ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಿ. ಕಾಂಗ್ರೆಸ್‌ಗೆ ಕೆಲಸ ಮಾಡಬೇಡಿ ಎಂದು ರಮೇಶ್ ಜಾರಕಿಹೊಳಿ ತಮ್ಮ ಅನುಯಾಯಿಗಳಿಗೆ ಹೇಳಿದ್ದಾರೆಂಬ ವರದಿಗಳು ಸಾಕಷ್ಟು ಕುತೂಹಲ ಕೆರಳಿಸಿವೆ.

ತಮ್ಮ ನಿವಾಸದಲ್ಲಿ ಕಾರ್‍ಯಕರ್ತರು, ಬೆಂಬಲಿಗರ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಅವರು ನೇರವಾಗಿ ಬಿಜೆಪಿ ಪರ ವಕಾಲತ್ತು ವಹಿಸಿ ಮಾತನಾಡಿದರು ಎಂದು ಹೇಳಲಾಗಿದೆ.

ಈ ಮುಂಚೆ ಚುನಾವಣೆಯಲ್ಲಿ ತಟಸ್ಥರಾಗಿರಲು ರಮೇಶ್ ಜಾರಕಿಹೊಳಿ ನಿರ್ಧಾರಿಸಿದ್ದಾರೆ ಎಂಬ ವರದಿಗಳಿದ್ದವು. ಆದರೆ ಈಗ ಅವರು ಬಿಜೆಪಿ ಪರ ಕೆಸ ಮಾಡುವಂತೆ ಸಲಹೆ ನೀಡಿರುವುದಾಗಿ ವರದಿಯಾಗಿದೆ.

ಈ ಮಧ್ಯೆ ರಮೇಶ್ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರ ಸಹೋದರ ಸತೀಶ್ ಜಾರಕಿಹೊಳಿ ಪಕ್ಷದ ನಾಯಕತ್ವಕ್ಕೆ ಶಿಫಾರಸು ಮಾಡಿರುವುದಾಗಿಯೂ ವರದಿಯಾಗಿತ್ತು

ಕಳೆದ ಕೆಲ ದಿನಗಳಿಂದ ಬೆಳಗಾವಿಯ ಚಿಕ್ಕೋಡಿ ನಿಪ್ಪಾಣಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಬಿಜೆಪಿ ಪರ ಕೆಲಸ ಮಾಡುತ್ತಿರುವುದು ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಗೋಕಾಕ್ ನಗರಸಭೆ ಕೆಲ ಸದಸ್ಯರ ಜತೆಗೆ ರಮೇಶ್ ಇತ್ತೀಚೆಗೆ ಚರ್ಚೆ ನಡೆಸಿದ್ದು, ತಸ್ಥರಾಗಿರುವ ನಿರ್ಧಾರ ಮಾಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡದಿರುವ ರಮೇಶ್ ಮತ್ತು ಬೆಂಬಲಿಗರ ನಿರ್ಧಾರ ಹಲವರ ಕಣ್ಣು ಕೆಂಪಾಗಿಸಿತ್ತು.

ತಮ್ಮ ಬೆಂಬಲಿಗ ಕಾರ್ಯಕರ್ತರು ಹಾಗೂ ಹಲವು ಮುಖಂಡರ ಜತೆಗೆ ಚರ್ಚೆನಡೆಸಿದ್ದು, ಚುನಾವಣೆ ಬಳಿಕ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ರಮೇಶ್ ಅವರು ಬಿಜೆಪಿ ಕಡೆ ವಾಲಿರುವುದು ಸ್ಪಷ್ಟ ಎಂದು ಅವರ ಕ್ಯಾಂಪಿನ ಮೂಲಗಳೇ ತಿಳಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com