ವಿಜಯಪುರದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 51 ಲಕ್ಷ ಮೌಲ್ಯದ ಮದ್ಯ ವಶ

ಇಂದು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಈ ನಡುವೆ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಂದಾಜು 51 ಲಕ್ಷ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಬಿಸಿಲಿನ ಮಧ್ಯೆಯೂ ಇಂದು ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಈ ನಡುವೆ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 5,544 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು 51 ಲಕ್ಷ ರೂ. ಮೌಲ್ಯದ ಬಿಯರ್ ತುಂಬಿದ ಬಾಟಲ್‍ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ವಾಹನ ಚಾಲಕ ನಂದಕಿಶೋರನನ್ನು ಪೊಲೀಸರು ಬಂಧಿಸಿದ್ದಾರೆ.

ಅಬಕಾರಿ ಇಲಾಖೆಯ ಡಿಸಿ ರವಿಶಂಕರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com