‘ಕಿರಿಕ್ ಪಾರ್ಟಿ’ ಬೆಡಗಿಗೆ ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಆಫರ್..!

ಸ್ಯಾಂಡಲ್ ವುಡ್ ಸುಂದರ ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್, ಕಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಈಗ ಬಾಲಿವುಡ್ ನಲ್ಲಿ ಮಿಂಚುವ ಅವಕಾಶ ಸಿಗ್ತಿದೆ. ರಶ್ಮಿಕಾಗೆ ಲಾಟರಿ ಹೊಡೆದಿದೆ ಎಂಬ ಸುದ್ದಿ ಬರ್ತಿದೆ. ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ರಶ್ಮಿಕಾರಿಗೆ ಆಫರ್ ನೀಡಿದ್ದಾರೆ ಎನ್ನಲಾಗ್ತಿದೆ.

ಸಂದರ್ಶನವೊಂದರಲ್ಲಿ ರಶ್ಮಿಕಾಗೆ ಆಫರ್ ಬಂದಿರುವ ಸಂಗತಿ ಬಹಿರಂಗವಾಗಿದೆ. ಸಂಜಯ್ ಲೀಲಾ ಬನ್ಸಾಲಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಯಾಗಲು ರಶ್ಮಿಕಾ ತಯಾರಿ ನಡೆಸುತ್ತಿದ್ದಾರೆ. ಆದಷ್ಟು ಬೇಗ ರಶ್ಮಿಕಾ ಬಾಲಿವುಡ್ ಗೆ ಕಾಲಿಡಲಿದ್ದಾರೆ ಎನ್ನಲಾಗ್ತಿದೆ. ನಿರ್ದೇಶಕರ ಜೊತೆ ಮಾತುಕತೆ ನಡೆಯುತ್ತಿದ್ದು, ಅಂತಿಮ ನಿರ್ಧಾರ ಬಾಕಿಯಿದೆ.

ಸಂಜಯ್ ಲೀಲಾ ಬನ್ಸಾಲಿ ಮುಂದಿನ ಪ್ರಾಜೆಕ್ಟ್ ಥ್ರಿಲ್ಲರ್ ಸಿನಿಮಾ. ಇದ್ರಲ್ಲಿ ರಣದೀಪ್ ಹೂಡಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೂಡಾಗೆ ರಶ್ಮಿಕಾ ನಾಯಕಿಯಾಗಲಿದ್ದಾರೆ ಎನ್ನಲಾಗ್ತಿದೆ. ಚಿತ್ರ ಆಗಸ್ಟ್ ನಲ್ಲಿ ಶೂಟಿಂಗ್ ಶುರು ಮಾಡುವ ಸಾಧ್ಯತೆಯಿದ್ದು, ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.

 

Leave a Reply

Your email address will not be published.

Social Media Auto Publish Powered By : XYZScripts.com