‘ರಾಧಾ ರಮಣ’ ಧಾರಾವಾಹಿಗೆ ಕಾವ್ಯ ಗೌಡ ರಾಧಾ ಮಿಸ್ ಆಗಿ ಎಂಟ್ರಿ..

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.

ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com