05 ಲಕ್ಷ ಗಡಿ ಮುಟ್ಟಿದ ಕೊರೊನಾ; ಇಂದು 17,296 ಹೊಸ ಪ್ರಕರಣಗಳ ಪತ್ತೆ!

ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನಕ್ಕೆ ಈ ವಾರದಲ್ಲಿ ದಿನಕ್ಕೆ 17ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.  ಮೊನ್ನೆಯಷ್ಟೇ ದೇಶದ ಕೊರೋನಾ ಪೀಡಿತರ ಸಂಖ್ಯೆ ನಾಲ್ಕೂವರೆ ಲಕ್ಷದ ದಾಟಿತ್ತು. ಈಗ ಐದು ಲಕ್ಷದ ಗಡಿ ಬಳಿ ಬಂದು ನಿಂತಿದೆ.

ಗುರುವಾರ 17,296 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 4,90,401ಕ್ಕೆ ಏರಿಕೆಯಾಗಿದೆ. ಇದಲ್ಲದೆ ಗುರುವಾರ 407 ಮಂದಿ ಕೊರೋನಾದಿಂದ ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 15 ಸಾವಿರ ದಾಟಿದ್ದು 15,301ಕ್ಕೆ ಏರಿಕೆಯಾಗಿದೆ.

ಈವರೆಗೆ ಕೊರೊನಾದಿಂದ ಗುಣ ಆದವರು 2,85,637 ಜನ ಮಾತ್ರ. ದೇಶದಲ್ಲಿ ಇನ್ನೂ 1,89,463 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392 ಪ್ರಕರಣಗಳು ಪತ್ತೆಯಾಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights