ಹುಟ್ಟುಹಬ್ಬದ ಪ್ರಯುಕ್ತ ಡಿಕೆಶಿ ಗೆ ಚಿನ್ನದ ಉಂಗುರ ಹಾಕಿ ಶ್ರೀಗಳ ಆಶೀರ್ವಾದ

ಹುಟ್ಟುಹಬ್ಬದ ಪ್ರಯುಕ್ತ ಮುಕ್ತಿ ಮಂದಿರ ದೇವಾಲಯಕ್ಕೆ ಆಗಮಿಸಿದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಚಿನ್ನದ ಉಂಗುರ ಹಾಕಿ ವಿಮಲ ರೇಣುಕಾ ಶಿವಾಚಾರ್ಯ ಶ್ರೀಗಳು ಆಶೀರ್ವಾದ ಮಾಡಿದ್ದಾರೆ.
ಪೂರ್ಣ ಕುಂಭ ಹೊತ್ತ ನೂರಾರು ಮಹಿಳೆಯರು, ಅಭಿಮಾನಿಗಳಿಂದ ಡಿಕೆಶಿ ಅವರಿಗೆ ಅದ್ಧೂರಿ ಸ್ವಾಗತ ಸಿಕ್ಕಿತು. ವೀರಶೈವ ಲಿಂಗಾಯತ ಮಠದಲ್ಲಿ ಡಿಕೆಶಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಶ್ರೀಗಳು ಶಾಲು  ಹಾಕಿ ಸಚಿವರನ್ನು ಸ್ವಾಗತಿಸಿದರು.
ಈ ವೇಳೆ ಡಿಕೆಶಿ ಅಭಿಮಾನಿಗಳಿಂದ ಮಹಿಳೆಯರು ಹಾಗೂ ಮಕ್ಕಳಿಗೆ ಧಾರವಾಡ ಪೇಡೆ ಹಂಚಿದರು.

Leave a Reply

Your email address will not be published.

Social Media Auto Publish Powered By : XYZScripts.com