Kar drama : ಸರ್ಕಾರ ಬಿದ್ದರೆ BJPಯಿಂದ ಸರ್ಕಾರ ರಚನೆ – ಹೊಸ ಡ್ರೆಸ್ ನೊಂದಿಗೆ BSY ರೆಡಿ..

ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ದೋಸ್ತಿ ಸರ್ಕಾರ ಉರುಳಿಬಿದ್ದರೆ ಹೊಸ ಸರ್ಕಾರ ರಚನೆಗೆ ನಾವು ಮುಂದಡಿ ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಚಿಂಚೋಳಿಗೆ ಹೊಂದಿಕೊಂಡಿರುವ ತಾಂಡೂರಿನಲ್ಲಿ ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದು, ಮಾತನಾಡಿದ ಅವರು, ನಾವೇನೂ ಸನ್ಯಾಸಿಗಳಲ್ಲ. ಒಂದು ವೇಳೆ ಸರ್ಕಾರ ಬಿದ್ದರೆ ಹೊಸ ಸರ್ಕಾರ ರಚನೆಯ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಸರ್ಕಾರದ ಪತನಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಇರುವ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರಕ್ಕೆ ಬಡವರ, ದೀನ ದಲಿತರ, ಬರಪೀಡಿತ ಪ್ರದೇಶಗಳ ಜನರ ಬಗ್ಗೆ ಕಾಳಜಿ ಇಲ್ಲದಂತಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಅವಧಿಯಲ್ಲಿ ಆಡಳಿತ ನೆಲ ಕಚ್ಚಿದೆ ಎಂದು ಆರೋಪಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ಸದ್ಯದಲ್ಲೇ ರಾಜಕೀಯ ಧೃವೀಕರಣವಾಗಲಿದೆ ಎಂದು ಭವಿಷ್ಯ ನುಡಿದರು.

ಪ್ರಚಾರದ ಸಂದರ್ಭದಲ್ಲಿ ಈ ಹಿಂದೆ ವೀರೇಂದ್ರ ಪಾಟೀಲರಿಗೆ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್. ಅಂತಹ ಪಕ್ಷಕ್ಕೆ ಲಿಂಗಾಯತರು ಮತ ಹಾಕುವುದು ಅಪರಾಧವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಈಗಿರುವ ಸರ್ಕಾರ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಭಾಗದಲ್ಲಿ ಒಂದು ವರ್ಷದೊಳಗೆ ಕ್ಕರೆ ಕಾರ್ಖಾನೆ ಆರಂಭ ಮಾಡುತ್ತೇವೆ ಎಂದು ಯಡಿಯೂರಪ್ಪ ಅವರು ಮತದಾರರಿಗೆ ಭರವಸೆ ನೀಡಿದರು.

Leave a Reply

Your email address will not be published.

Social Media Auto Publish Powered By : XYZScripts.com