ಬಿಡುಗಡೆಗೂ ಮೊದಲೇ ಸದ್ದು ಮಾಡಿದ ‘ಕುರುಕ್ಷೇತ್ರ’ : ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ವರಮಹಾಲಕ್ಷ್ಮಿ ಹಬ್ಬದ ದಿನ ಬಿಡುಗಡೆಯಾಗಲಿದೆ. ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕುರುಕ್ಷೇತ್ರ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

ಹೈ ಬಜೆಟ್ ನಲ್ಲಿ ‘ಕುರುಕ್ಷೇತ್ರ’ ನಿರ್ಮಾಣವಾಗಿದ್ದು, ಬಿಡುಗಡೆಗೂ ಮೊದಲೇ ದಾಖಲೆ ಬರೆದಿದೆ. ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ 9.50 ಕೋಟಿ ರೂ.ಗೆ ಮಾರಾಟವಾಗಿದೆ.

ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ದಾಖಲೆ ಎಂದು ಹೇಳಲಾಗಿದೆ. ಇನ್ನು ಕನ್ನಡ ಅವತರಣಿಕೆಯ ಸ್ಯಾಟಲೈಟ್ ಹಕ್ಕುಗಳು 9 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗಿದೆ. ಬಹು ಭಾಷೆಗಳಲ್ಲಿ ‘ಕುರುಕ್ಷೇತ್ರ’ ಬಿಡುಗಡೆಯಾಗಲಿದ್ದು, ಚಿತ್ರದ ಕುರಿತ ಕುತೂಹಲ ಹೆಚ್ಚಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com