ಹುರ್ರೇ… ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಿಕ್ ಅಪ್, ಡ್ರಾಪ್ ಸೇವೆ

ಮಕ್ಕಳು, ಸೌಲಭ್ಯಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ದೂರುಗಳ ನಡುವೆಯೇ, ಸರ್ಕಾರಿ ಶಾಲೆಗಳ ಉಳಿವಿಗೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ತೆಲಂಗಾಣದಲ್ಲಿ ಉಚಿತವಾಗಿ ಪಿಕ್ ಅಪ್ ಮತ್ತು ಡ್ರಾಪ್ ಸೇವೆಯನ್ನು ನೀಡಲಾಗುತ್ತಿದೆ. ಮುಖ್ಯಮಂತ್ರಿ ಕೆಸಿಆರ್ ನೇತೃತ್ವದ ಸರ್ಕಾರ ತೆಲಂಗಾಣದ 20,012 ಸರ್ಕಾರಿ ಶಾಲೆ ಮಕ್ಕಳಿಗೆ ಸಮಗ್ರ ಶಿಕ್ಷಣ ಕಾರ್ಯಕ್ರಮದಡಿ ಆಟೋರಿಕ್ಷಾ, ವ್ಯಾನ್ ಗಳ ಮೂಲಕ ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ಮಕ್ಕಳನ್ನು ಕರೆದೊಯ್ಯುವ ವ್ಯವಸ್ಥೆ ಮಾಡಿದೆ.

ಈ ಶೈಕ್ಷಣಿಕ ವರ್ಷದಿಂದಲೇ ಯೋಜನೆ ಜಾರಿಗೆ ಬರಲಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com