ಎ. ಮಂಜು, ಮಧು ಬಂಗಾರಪ್ಪ, ಅಶ್ವಥ್ ನಾರಾಯಣರ ಸೋಲು ಬಹುತೇಕ ಖಚಿತ..!

ಅನೇಕ ಕ್ಷೇತ್ರಗಳಲ್ಲಿ ಮತ ಎಣಿಕೆ ಮುಕ್ತಾಯವಾಗಿದ್ದು, ಫಲಿತಾಂಶದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಹಾಸನ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭರ್ಜರಿ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎ. ಮಂಜು ಪರಾಭವಗೊಂಡಿದ್ದಾರೆ.

ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಭದ್ರಕೋಟೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಜಯ ಗಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 1.50 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸೋಲು ಕಂಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com