ಕಲಬುರ್ಗಿಯಲ್ಲಿ ತಂದೆ ಉಮೇಶ್ ಜಾಧವ್ ಚಿಂಚೋಳಿಯಲ್ಲಿ ಪುತ್ರ ಅವಿನಾಶ್ ಜಾಧವ್ ಜಯಭೇರಿ!

ಕಲಬುರ್ಗಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭರ್ಜರಿ ಜಯಗಳಿಸಿದ್ದಾರೆ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಭರ್ಜರಿ ಗೆಲುವು ಕಂಡಿದ್ದಾರೆ.

ಭಾರಿ ಕುತೂಹಲ ಮೂಡಿಸಿದ್ದ ಕಲಬುರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರಾಭವಗೊಂಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಗೆಲುವು ಕಂಡಿದ್ದಾರೆ. ಅಂತೆಯೇ ಅವರ ಪುತ್ರ ಅವಿನಾಶ್ ಜಾಧವ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಕಲಬುರ್ಗಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ 83000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಚಿಂಚೋಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ 11595 ಅಂತರದಲ್ಲಿ ಗೆಲುವು ಕಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com