ಮೇ 30 ರಂದು ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ..

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ.ಎಸ್.ಆರ್. ಕಾಂಗ್ರೆಸ್ ಪಾರ್ಟಿ ಭರ್ಜರಿ ಜಯಗಳಿಸಿದೆ.

175 ಕ್ಷೇತ್ರಗಳ ವಿಧಾನಸಭೆಯಲ್ಲಿ ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ 152 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆಡಳಿತ ಪಕ್ಷ ತೆಲುಗುದೇಶಂ ಪಾರ್ಟಿಗೆ ಭಾರೀ ಹಿನ್ನಡೆಯಾಗಿದ್ದು, ಪಕ್ಷದ ಅಭ್ಯರ್ಥಿಗಳು ಕೇವಲ 23 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಗೆ ಪ್ರಯತ್ನ ನಡೆಸಿದ್ದ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮುಖಭಂಗವಾಗಿದೆ. ಅವರ ಪಕ್ಷ ಹೀನಾಯ ಸೋಲು ಕಂಡಿದೆ.

ಮೇ 30 ರಂದು ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ‘ಜಗನ್ ಮೋಹನ್ ರೆಡ್ಡಿ, ಚೀಫ್ ಮಿನಿಸ್ಟರ್, ಆಂಧ್ರಪ್ರದೇಶ’ ಎನ್ನುವ ನಾಮಫಲಕಗಳು ರಾರಾಜಿಸತೊಡಗಿವೆ.

 

Leave a Reply

Your email address will not be published.

Social Media Auto Publish Powered By : XYZScripts.com