ಹಾಸನ ಕ್ಷೇತ್ರವನ್ನು ತಾತ ದೇವೇಗೌಡರಿಗೆ ಬಿಟ್ಟುಕೊಡಲು ನಿರ್ಧರಿಸಿದ ಪ್ರಜ್ವಲ್..!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟ ರಾಜ್ಯದಲ್ಲಿ ಹೀನಾಯವಾಗಿ ಸೋತಿದೆ. ಉಭಯ ಪಕ್ಷಗಳು ತಲಾ ಒಂದೊಂದು ಕ್ಷೇತ್ರಗಳಲ್ಲಿ ಮಾತ್ರ ಜಯ ಗಳಿಸಿವೆ.

ಇದರ ಮಧ್ಯೆ ತಮ್ಮ ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ಕೊಟ್ಟು ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ವಿರುದ್ಧ ಪರಾಭವಗೊಂಡಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಬಿಜೆಪಿ ಅಭ್ಯರ್ಥಿ ಮಂಜು ವಿರುದ್ಧ ಜಯ ಸಾಧಿಸಿದ್ದು, ಈಗ ಈ ಕ್ಷೇತ್ರವನ್ನು ತಮ್ಮ ತಾತ ದೇವೇಗೌಡರಿಗೆ ಬಿಟ್ಟುಕೊಡಲು ಪ್ರಜ್ವಲ್ ರೇವಣ್ಣ ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ಪ್ರಸಕ್ತ ಕಾಲಘಟ್ಟದಲ್ಲಿ ಲೋಕಸಭೆಯಲ್ಲಿ ದೇವೇಗೌಡರಂತಹ ಅನುಭವಿ ರಾಜಕಾರಣಿಗಳು ಇರುವುದು ಅಗತ್ಯ ಎಂಬ ಕಾರಣಕ್ಕಾಗಿ ಪ್ರಜ್ವಲ್ ರೇವಣ್ಣ ಈ ತೀರ್ಮಾನಕ್ಕೆ ಬಂದಿದ್ದಾರೆಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣ ಈಗ ಬೆಂಗಳೂರಿಗೆ ತೆರಳುತ್ತಿದ್ದು, ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಹಾಸನ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ಕುರಿತು ಪ್ರಕಟಣೆ ನೀಡುವ ಸಾಧ್ಯತೆ ಇದೆ.

 

Leave a Reply

Your email address will not be published.

Social Media Auto Publish Powered By : XYZScripts.com