‘ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ’ ದೀದಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕೌನ್ಸಿಲರ್ ಗಳ ಸಭೆಯಲ್ಲಿ ಮಾತನಾಡಿದ ಅವರು, ಹಣದ ಆಸೆಗಾಗಿ 15ರಿಂದ 20 ಕೌನ್ಸಿಲರ್ ಗಳು ಪಕ್ಷ ತೊರೆದರೆ ನಾನು ಹೆದರುವುದಿಲ್ಲ. ಶಾಸಕರು ಪಕ್ಷವನ್ನು ಬಿಟ್ಟು ಹೋಗಲು ಇಚ್ಛಿಸಿದರೆ ಬಿಟ್ಟು ಹೋಗಲಿ. ಪಕ್ಷದಲ್ಲಿ ಕಳ್ಳರನ್ನು ಇಟ್ಟುಕೊಳ್ಳಲು ನಾವು ಬಯಸುವುದಿಲ್ಲ ಎಂದು ಗುಡುಗಿದರು.

ವೈದ್ಯರ ಮುಷ್ಕರ ಬೆನ್ನಲ್ಲೇ ಟಿಎಂಸಿಗೆ ಪಕ್ಷಾಂತರ ಶಾಕ್ ಉಂಟಾಗಿದೆ. ನವದೆಹಲಿಯಲ್ಲಿ ಸೋಮವಾರ ತೃಣಮೂಲ ಕಾಂಗ್ರೆಸ್‍ನ ಶಾಸP ಸುನೀಲ್ ಸಿಂಗ್ ಹಾಗೂ 15 ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಶ್ ವಿಜಯವರ್ಗೀ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಟಿಎಂಸಿಯ ಇಬ್ಬರು ಶಾಸಕರು, 50ಕ್ಕೂ ಜನ ಕೌನ್ಸಿಲರ್ ಗಳು ಮೇ 28ರಂದು ಬಿಜೆಪಿ ಸೇರಿದ್ದರು. ಈ ಮೂಲಕ ತೃಣಮೂಲ ಕಾಂಗ್ರೆಸ್‍ನ 10 ಶಾಸಕರು ಈಗಾಗಲೇ ಬಿಜೆಪಿ ಸೇರಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com