ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಡಿ.ಕೆ. ಚೌಟ ಇನ್ನಿಲ್ಲ!

ಹಿರಿಯ ರಂಗಕರ್ಮಿ, ರಂಗ ನಿರಂತರ ಕಾರ್ಯಾಧ್ಯಕ್ಷರಾಗಿದ್ದ ಡಿ.ಕೆ. ಚೌಟ ಅವರು ಇಂದು ವಿಧಿವಶರಾಗಿದ್ದಾರೆ. ಡಿ.ಕೆ. ಚೌಟ ಅವರಿಗೆ 82 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿ.ಕೆ. ಚೌಟ ಅವರ ನಿಧನದಿಂದ ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ.

ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿದ್ದ ಡಿ.ಕೆ. ಚೌಟ ತುಳು ಸಾಹಿತ್ಯ ಆಕಾಡೆಮಿಯಿಂದ ಪ್ರಶಸ್ತಿಯನ್ನೂ ಪಡೆದಿದ್ದರು. ಚಿತ್ರಕಲಾ ಪರಿಷತ್‌ ಅಧ್ಯಕ್ಷರಾಗಿಯೂ ಡಿ.ಕೆ. ಚೌಟ ಕಾರ್ಯ ನಿರ್ವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com