ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೊಸ ಬಾಂಬ್ ಸಿಡಿಸಿದ ಹೆಚ್.‌ ವಿಶ್ವನಾಥ್‌

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.‌ ವಿಶ್ವನಾಥ್‌, ಒಂದೊಮ್ಮೆ ತಮ್ಮ ರಾಜೀನಾಮೆ ಅಂಗೀಕಾರವಾಗದಿದ್ದರೆ ಅನಿವಾರ್ಯವಾಗಿ ಹುಣಸೂರು ಕ್ಷೇತ್ರದ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಹಲವು ದಿನಗಳೇ ಕಳೆದಿವೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ರಾಜ್ಯಾಧ್ಯಕ್ಷ ಸ್ಥಾನವನ್ನು ನಿಭಾಹಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.

ವಿಧಾನಸಭೆಗೆ ಮಧ್ಯಂತರ ಚುನಾವಣೆ ಯಾವ ಸಂದರ್ಭದಲ್ಲಾದರೂ ಎದುರಾಗಬಹುದಾದ ಸಾಧ್ಯತೆಯಿರುವುದರಿಂದ ಕುಮಾರಸ್ವಾಮಿಯವರೇ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿ. ಈ ಹಿಂದೆ ಹಲವರು ಮುಖ್ಯಮಂತ್ರಿ ಹಾಗೂ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಿದ ಉದಾಹರಣೆಗಳಿವೆ ಎಂದು ವಿಶ್ವನಾಥ್‌ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com