ಮುಂಬೈನಿಂದ ವಿಧಾನಸೌಧಕ್ಕೆ ಬಂದ ಅತೃಪ್ತ ಶಾಸಕರು : ಬಿಗಿ ಭದ್ರತೆಯಲ್ಲಿ ಸ್ಪೀಕರ್ ಭೇಟಿ

ರಾಜೀನಾಮೆ ನೀಡಿ ಮುಂಬೈನಲ್ಲಿ ತಂಗಿದ್ದ ಅತೃಪ್ತ ಶಾಸಕರು ಇಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಕೆಲವು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ. ಕೆಲವು ಶಾಸಕರು ಸ್ಪೀಕರ್ ಎದುರು ಹಾಜರಾಗಿ ರಾಜೀನಾಮೆ ಬಗ್ಗೆ ಮಾಹಿತಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿದ್ದ ಶಾಸಕರೆಲ್ಲ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಮೊದಲೇ ಬಂದಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ ವಿಶೇಷ ವಿಮಾನದಲ್ಲಿ ಬಂದ ಶಾಸಕರನ್ನು ಏರ್ಪೋರ್ಟ್ ನಲ್ಲಿ ಬರಮಾಡಿಕೊಂಡಿದ್ದಾರೆ.

ಹೆಚ್.ಎ.ಎಲ್. ಏರ್ಪೋರ್ಟ್ ಗೆ ಆಗಮಿಸಿದ ಶಾಸಕರನ್ನು ಬಿಗಿಭದ್ರತೆಯಲ್ಲಿ ವಿಧಾನಸೌಧಕ್ಕೆ ಕರೆತರಲಾಗಿದೆ. ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸರ್ಪಗಾವಲು ಹಾಕಲಾಗಿದೆ. ಸ್ಪೀಕರ್ ಸೂಚನೆ ಹಿನ್ನಲೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com