ಸ್ಪೀಕರ್ ಸಲ್ಲಿಸಿರುವ ತುರ್ತು ವಿಚಾರಣೆ ಅರ್ಜಿಗೆ ಸುಪ್ರೀಂಕೋರ್ಟ್ ನಿರಾಕಾರ….

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಹತ್ತು ಮಂದಿ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಪತ್ರವನ್ನು ಗುರುವಾರ ಸಂಜೆಯೊಳಗೆ ಪರಿಶೀಲಿಸಿ ನಿರ್ಧಾರ ಪ್ರಕಟಿಸಬೇಕೆಂದು ಸುಪ್ರೀಂಕೋರ್ಟ್ ಸ್ಪೀಕರ್ ರಮೇಶ್ ಕುಮಾರ್ ಗೆ ನೀಡಿರುವ ಆದೇಶದ ಬಗ್ಗೆ ಸ್ಪೀಕರ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

 

ಸ್ಪೀಕರ್ ಸಲ್ಲಿಸಿರುವ ಅರ್ಜಿಯ ವಾದವೇನು?

ಇಂದು ಸಂಜೆ 6ಗಂಟೆಯೊಳಗೆ ಅತೃಪ್ತ ಶಾಸಕರ ಅರ್ಜಿ ಪರಿಶೀಲಿಸಿ, ನಿರ್ಧಾರ ಪ್ರಕಟಿಸಲು ಅಸಾಧ್ಯ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 12ಗಂಟೆವರೆಗೆ ಅವಕಾಶ ನೀಡಬೇಕು.

ಸ್ಪೀಕರ್ ಗೆ ಈ ರೀತಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಲು ಸಾಧ್ಯವಿಲ್ಲ.

ಶಾಸಕರು ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೋ, ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸಬೇಕು.

ಮೊದಲು ಶಾಸಕರ ಅನರ್ಹತೆ ಬಗ್ಗೆ ಪರಿಶೀಲನೆ ನಡೆಸಬೇಕು, ನಂತರ ರಾಜೀನಾಮೆ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ.

ಹೀಗಾಗಿ ಇಂದು ಸಂಜೆ 6ಗಂಟೆಯೊಳಗೆ ರಾಜೀನಾಮೆ ಪರಿಶೀಲಿಸಿ, ನಿರ್ಧಾರ ಪ್ರಕಟಿಸಲು ಸಾಧ್ಯವಿಲ್ಲ. ಈ ಅರ್ಜಿಯ ತುರ್ತು ವಿಚಾರಣೆ ನಡೆಸಿ ಆದೇಶ ನೀಡಬೇಕೆಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

 

ಸುಪ್ರೀಂ ಹೇಳಿದ್ದೇನು?

ಇಂದು ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಯಾವುದೇ ನಿರ್ಧಾರ ಕೈಗೊಳ್ಳಬಹುದು.

ನಿಮ್ಮ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ

ನಾಳೆ ಅತೃಪ್ತ ಶಾಸಕರ ಅರ್ಜಿಯ ಜೊತೆ ನಿಮ್ಮ ವಾದವನ್ನು ಆಲಿಸುತ್ತೇವೆ.

ಸ್ಪೀಕರ್ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದು, ಸ್ಪೀಕರ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com