ವಿಶ್ವಾಸ ಮತ ಯಾಚನೆಗೆ ಸಮಯ ನಿಗದಿ : ಸ್ಪೀಕರ್‌ ಗೆ ಸಿಎಂ ಮನವಿ

ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಇನ್ನೂ ಇತ್ಯರ್ಥವಾಗದೆ ಉಳಿದಿರುವ ಬೆನ್ನಲ್ಲೆ ಸದನದ ಕಲಾಪ ಶುಕ್ರವಾರ ಆರಂಭವಾಗಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ಮಾಡುವುದಾಗಿ ಘೋಷಿಸಿದ್ದಾರೆ. ಕಲಾಪ ಆರಂಭವಾದ ಬಳಿಕ ಸಂತಾಪ ಸೂಚನೆ ಭಾಷಣದ ವೇಳೆ ಸಿಎಂ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದೇನೆ ಎಂದರು.

ಸದನದ ಬೆಂಬಲವಿದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಬಹುದು ಎಂದರು. ವಿಶ್ವಾಸ ಮತ ಯಾಚನೆಗೆ ಸಮಯ ನಿಗದಿ ಪಡಿಬೇಕು ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕರ ಮೇಲೆ ತೀವ್ರ ನಿಗಾ ಇರಿಸಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಮಂಗಳವಾರದ ವರೆಗೆ ರಿಲೀಫ್ ಸಿಕ್ಕಿದೆ. ಶುಕ್ರವಾರ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಯಥಾಸ್ಥಿತಿ ಮುಂದುವರಿಯಲು ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಅತೃಪ್ತ ಶಾಸಕರು ಅನರ್ಹತೆ ಭೀತಿ ಯಿಂದ ಪಾರಾಗಿದ್ದಾರೆ. ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com