ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತನು ಸ್ಥಳಕ್ಕೆ ಪೊಲೀಸ್ ದಾಳಿ…!
ಮೈಸೂರಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತನು ಸ್ಥಳಕ್ಕೆ ಟಿ. ನರಸೀಪುರ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ಮಾಡಿದ್ದಾರೆ.
ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಯೊಂದರಲ್ಲಿ ಶೇಖರಿಸಿಟ್ಟಿದ್ದ 18 ಅಕ್ಕಿ ಮೂಟೆಗಳು, ಅನ್ನಭಾಗ್ಯ ಯೋಜನೆಯ ಅಕ್ಕಿ, ಬೇಳೆ, ಶಾಲಾ ಮಕ್ಕಳ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪ್ಯಾಕೆಟ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಎಲ್ಲಾ ಪದಾರ್ಥಗಳನ್ನು ಜಬೀವುಲ್ಲಾ ಎಂಬವರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ದಾಳಿಯ ಮುನ್ಸೂಚನೆ ಅರಿತ ದಂಧೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.